ಬೊಸಗಾ ಕೆರೆ ತುಂಬಿರುವ ಹಿನ್ನೆಲೆ: ಕೆರೆಯ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶ ನಿಷೇಧ
ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಬೊಸಗಾ ಕೆರೆಯ ಮೇಲ್ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಪ್ರವಾಹ ಬಂದು ಈ ಕೆರೆಯು ತುಂಬಿರುತ್ತದೆ. ಆದ್ದರಿಂದ ಈ ಕೆರೆಯ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಲಬುರಗಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಈ ಕೆರೆ ತುಂಬಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಓಡಾಟ ಸೂಕ್ತವಾಗಿರುವುದಿಲ್ಲ. ಕೆರೆ ಪ್ರದೇಶದಲ್ಲಿ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದ್ದರೂ ಸಹ ಸಾರ್ವಜನಿಕರು ಕೆರೆಯ ಏರಿನ ಹಾಗೂ ಗ್ರಾಮೀಣ ಪ್ರದೇಶಗಳ ಮೇಲೆ ಹಾಗೂ ಕೆಳಭಾಗದಲ್ಲಿ ಓಡಾಡುತ್ತಿದ್ದಾರೆ. ಸಾರ್ವಜನಿಕರು ಈ ಕೆರೆಯ ಸುತ್ತ ಮುತ್ತಲು ಓಡಾಡಬಾರದು. ಕಲಬುರಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ಜಲಮಂಡಳಿ ಯೊಂದಿಗೆ ಸಹಕರಿಸಬೇಕೆಂದು ತಿಳಿಸಿದ್ದಾರೆ
ವರದಿ ಸಂಗಮೇಶ್ ಸರಡಗಿ ಕಲಬುರಗಿ