ಲಸಿಕೆ ನೀಡಿಕೆಯಲ್ಲಿ ಮತ್ತೊಂದು ಹೊಸ ಮೈಲಿಗಲ್ಲು
ನವದೆಹಲಿ,ಫೆ.7- ದೇಶದಲ್ಲಿ ದಿನದಿಂದ ದಿನಕ್ಕೆ ಲಸಿಕೆ ನೀಡಿಕೆ ಹೆಚ್ಚು ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪಿಸಿದೆ.
ಇದುವರೆಗೂ 170 ಕೋಟಿಗೂ ಅಧಿಕ ಡೋಸ್ ಲಸಿಕೆ ಮಾಡುವ ಮೂಲಕ ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಗೆ ಲಸಿಕೆ ನೀಡಿದ ದೇಶಗಳ ಪೈಕಿ ಭಾರತವೂ ಕೂಡ ಒಂದು ಎನ್ನುವ ಹಿರಿಮೆಗೆ ಪಾತ್ರವಾಗಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಸ ಸಾಧನೆ ಮತ್ತಷ್ಟು ಹೊಸ ಹುಮ್ಮಸ್ಸು,ಹುರುಪು ತರಿಸಿದೆ ಎಂದು ಅವರು ಹೇಳಿದೆ.
ಕೋವಿಡ್ ಸೋಂಕು ವಿರುದ್ಧದ ಹೋರಾಟದಲ್ಲಿ ಭಾರತ ಮಹತ್ತರ ಮೈಲುಗಲ್ಲು ಸ್ಥಾಪಿಸಿದೆ ಮುಂದಿನ ದಿನಗಳಲ್ಲಿ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದೆ..
ದೇಶದಲ್ಲಿ 170 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿರುವುದು ಭಾರತದ ಮಟ್ಟಿಗೆ ಹೆಗ್ಗಳಿಕೆಯ ಸಂಗತಿ 15ರಿಂದ 18 ವರ್ಷ, 18 ವರ್ಷದಿಂದ ವಿವಿಧ ವಯೋಮಾನದ ಜನರಿಗೆ ಲಸಿಕೆ ನೀಡಿಕೆ ಕಳೆದ ಒಂದು ವರ್ಷದಿಂದ ನಡೆಯುತ್ತಿದೆ ಎಂದು ತಿಳಿಸಿದೆ.
ಜನವರಿ ತಿಂಗಳಿನಿಂದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಪಡೆಯ ಸಿಬ್ಬಂದಿ ಹಾಗೂ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಹೆಚ್ಚುವರಿ ಲಸಿಕೆ ನೀಡಲಾಗುತ್ತದೆ ಮೂಲಕ ಕೋವಿಡ್ ಹೋರಾಟಕ್ಕೆ ಭಾರತ ಮತ್ತಷ್ಟು ಕೈಜೋಡಿಸಿದೆ ಹೋರಾಟ ಮುಂದುವರಿಯಲಿದೆ ಎಂದು ಹೇಳಿದೆ.
ದೇಶದಲ್ಲಿ ಹೊಸ ಮೈಲುಗಲ್ಲು ಸ್ಥಾಪನೆ ಮಾಡಲು ಕಾರಣರಾದ ವೈದ್ಯರು ದಾದಿಯರು ಆರೋಗ್ಯ ಕಾರ್ಯಕರ್ತರು ಸೇರಿದಂತೆ ಪ್ರತಿಯೊಬ್ಬರನ್ನು ಅಭಿನಂದಿಸುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ