ಕರ್ನಾಟಕ ಹಿಜಾಬ್ ವಿವಾದ: ಇಸ್ಲಾಮಾಬಾದಿನ ಭಾರತೀಯ ಹೈ ಕಮಿಷನ್ ಗೆ ಪಾಕಿಸ್ತಾನ ಸಮನ್ಸ್
ಇಸ್ಲಾಮಾಬಾದ್: ದೇಶದ ಗಮನ ಸೆಳೆದಿರುವ ಕರ್ನಾಟಕ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕ್ ಸರ್ಕಾರ ಇಸ್ಲಾಮಾಬಾದಿನ ಭಾರತೀಯ ಹೈಕಮಿಷನ್ ಗೆ ಸಮನ್ಸ್ ವಿಧಿಸಿದೆ.
ಇದನ್ನೂ ಓದಿ: ಹಿಜಾಬ್ ವಿವಾದ: ಮಧ್ಯಾಹ್ನ ರಿಟ್ ಅರ್ಜಿಗಳ ವಿಚಾರಣೆ, ಹೈಕೋರ್ಟ್ ತ್ರಿಸದಸ್ಯ ಪೀಠದತ್ತ ಎಲ್ಲರ ಕಣ್ಣು
ಹಿಜಾಬ್ ಧರಿಸಿದ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಶಿಕ್ಷಣ ನಿರಾಕರಿಸಿರುವುದಕ್ಕೆ ಪಾಕ್ ಆತಂಕ ವ್ಯಕ್ತಪಡಿಸಿದ್ದು, ಭಾರತ ಸರ್ಕಾರ ಈ ಕೂಡಲೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಸಚಿವರು ಪ್ರತಿಕ್ರಿಯಿಸಿದ್ದಾರೆ. ಹಿಜಾಬ್ ಧರಿಸುವುದು ಬಿಡುವುದು ಅವರವರ ವೈಯಕ್ತಿಕ ನಿರ್ಧಾರ. ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುವುದು ಮೂಲಭೂತ ಮಾನವ ಹಕ್ಕುಗಳ ಉಲ್ಲಂಘನೆ ಎಂದು ಪಾಕ್ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಮುಕ್ತರ್ ಅಬ್ಬಾಸ್ ನಖ್ವಿ ಅಭಿಪ್ರಾಯಪಟ್ಟಿದ್ದಾರೆ.