ಕನ್ನಡ ಅಭಿಮಾನ ನವೆಂಬರ್ 1 ಕ್ಕೆ ಮಾತ್ರ ಸೀಮಿತವಾಗದಿರಲಿ: ಡಿಕೆ ಶಿವಕುಮಾರ್
ಹೈಲೈಟ್ಸ್:
- 68 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಬುಧವಾರ ನಗರದ ಕಂಠೀರವ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು 9 ಗಂಟೆಗೆ ಕ್ಕೆ ಧ್ವಜಾರೋಹನ ನೆರವೇರಿಸಿದರು.
- ಉದ್ಯೋಗ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲಿಷ್ ಕಡ್ಡಾಯ ಮಾಡುತ್ತಿರುವುದಿಂದ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
- ಕನ್ನಡಿಗರಾದ ನಮಗೆ ಅಧಿಕೃತ ಧ್ವಜ ಬೇಕು. ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಆರು ವರ್ಷದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.
ಬೆಂಗಳೂರು: ಕನ್ನಡ ಭಾಷೆಯ ಮೇಲಿನ ಅಭಿಮಾನ ಕೇವಲ ನವೆಂಬರ್ 1 ಕ್ಕೆ ಮಾತ್ರ ಸೀಮಿತವಾಗದಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದ ಕಂಠೀರವ ಮೈದಾನದಲ್ಲಿ ಬುಧವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಹೃದಯ ಭಾಷೆಯಾಗಲಿ ಹಾಗೂ ಮನಸ್ಸಿನ ಭಾಷೆಯಾಗಲಿ ಎಂದು ಕರೆ ನೀಡಿದರು.
68 ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಬುಧವಾರ ನಗರದ ಕಂಠೀರವ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಅವರು 9 ಗಂಟೆಗೆ ಕ್ಕೆ ಧ್ವಜಾರೋಹನ ನೆರವೇರಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಶಿಕ್ಷಣ ಸಚಿವ ಮಧುಮಂಗಾರಪ್ಪ, ಶಾಸಕ ರಿಜ್ವಾನ್ ಹರ್ಷದ್ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಗೌರವ ವಂದನೆಯನ್ನು ಸಿಎಂ ಸಿದ್ದರಾಮಯ್ಯ ಸ್ವೀಕಾರ ಮಾಡಿದರು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕನ್ನಡ ರಾಜ್ಯೋತ್ಸವದ 50 ರ ಸಂಭ್ರಮವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಎಂದು ಘೋಷಣೆ ಮಾಡಲಾಗಿದೆ. ನಮ್ಮ ಇಲಾಖೆಯಿಂದ 13,000 ಶಿಕ್ಷಕರ ನೇಮಕ ಮಾಡಲಾಗಿದೆ. ಇನ್ನು ಅಗತ್ಯ ಇರುವ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದರು.
ಶಾಲೆಯ ಮಕ್ಕಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ 8,0311 ಹೊಸ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 600 ಕನ್ನಡ ಪಬ್ಲಿಕ್ ಶಾಲೆ ಸ್ಥಾಪನೆಯ ಉದ್ದೇಶ ಹೊಂದಲಾಗಿದೆ. ಸಸ್ಯ ಶ್ಯಾಮಲಾ ಕಾರ್ಯಕ್ರಮದ ಮೂಲಕ 50 ಸಾವಿರ ಸಸಿಗಳನ್ನು ನೆಡಲಾಗುವುದು. ಮಕ್ಕಳ ಬ್ಯಾಗ್ ಹೊರೆಯನ್ನು ಶೇ 50 ರಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕನ್ನಡ ಅಭಿಮಾನ ನವೆಂಬರ್ 1 ಕ್ಕೆ ಮಾತ್ರ ಸೀಮಿತವಾಗದಿರಲಿ: ಡಿಕೆ ಶಿವಕುಮಾರ್
ಕನ್ನಡ ಭಾಷೆಯ ಮೇಲಿನ ಅಭಿಮಾನ ಕೇವಲ ನವೆಂಬರ್ 1 ಕ್ಕೆ ಮಾತ್ರ ಸೀಮಿತವಾಗದಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ನಮಗೆ ಸ್ವರ್ಗ ಕರ್ನಾಟಕ ಮತ್ತು ಕನ್ನಡ ಭೂಮಿ. ಕರ್ನಾಟಕ ಏಕೀಕರಣಕ್ಕೆ ಹೋರಾಟ ಮಾಡಿದ ಲಕ್ಷಾಂತರ ಜನರನ್ನು ನೆನೆಯಬೇಕು. ಕನ್ನಡವನ್ನು ಮರೆತರೆ ತಾಯಿಯನ್ನು ಮರೆತಂತೆ ಎಂದು ಹೇಳಿದರು.
ಬಸ್‌ಗೆ, ರೈಲಿಗೆ ಬೆಂಕಿ ಹಚ್ಚುವುದಲ್ಲಿ ರಾಜ್ಯದ ಅಭಿಮಾನ ಇರುವುದಿಲ್ಲ ಎಂದ ಅವರು ಸರ್ವ ಜನಾಂಗದ ಶಾಂತಿಯ ತೋಟವನ್ನು ಮರಳಿ ಗಳಿಸಲು ಹೋರಾಡೋಣ ಎಂದರು. ಕನ್ನಡಿಗರ ಪ್ರತ್ಯೇಕ ಧ್ವಜಕ್ಕೆ ಮಾನ್ಯತೆ ಕೊಡಬೇಕು ಎಂದರು.
ಇನ್ನು ಶಾಸಕ ರಿಜ್ವಾನ್ ಹರ್ಷದ್ ಮಾತನಾಡಿ, ಏಕೀಕರಣದಲ್ಲಿ ತ್ಯಾಗ ಮಾಡಿದವರನ್ನು ಸ್ಮರಿಸಬೇಕು. 50 ವರ್ಷಗಳ ಹಿಂದೆ ದೇವರಾಜ್ ಅರಸು ಅವರು ಕರ್ನಾಟಕ ಎಂದು ನಾಮಾಕರಣ ಮಾಡಿದರು. ಇವಾಗ ಸಿದ್ದರಾಮಯ್ಯ ನೇತೃತ್ವದಲ್ಲಿ 50 ನೇ ವರ್ಷ ಆಚರಣೆ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.
ದೇಶದಲ್ಲಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡುವಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದ ಆಶಯವನ್ನು ಪೂರೈಸಲು ನಾವೆಲ್ಲಾ ಒಗ್ಗಟ್ಟಾಗಬೇಕು. ಇದಕ್ಕೆ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಂದರು.
ಕನ್ನಡಿಗರಾದ ನಮಗೆ ಅಧಿಕೃತ ಧ್ವಜ ಬೇಕು. ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಆದರೆ ಆರು ವರ್ಷದಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಎಲ್ಲರೂ ಒತ್ತಡ ಹಾಕಬೇಕು ಎಂದು. ಕನ್ನಡವನ್ನು ಕಡೆಗಣಿಸುವ ಕೆಲಸ ಕೇಂದ್ರ ಮಾಡುತ್ತಿದೆ. ಇದು ಖಂಡನೀಯ. ಉದ್ಯೋಗ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲಿಷ್ ಕಡ್ಡಾಯ ಮಾಡುತ್ತಿರುವುದಿಂದ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.