ರಾಜ್ಯೋತ್ಸವ ದಿನವೇ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯ ರಚನೆಯ ಕೂಗು; 12ಕ್ಕೂ ಹೆಚ್ಚು ಹೋರಾಟಗಾರ ವಶಕ್ಕೆ

ಕಲಬುರಗಿ: ಅಲ್ಲದೆ ತೆಲಂಗಾಣ ಮಾದರಿ ಪ್ರತ್ಯೇಕ ರಾಜ್ಯ ಹೋರಾಟ ಆರಂಭಿಸುತ್ತೇವೆ ಎಂದು ಬುಧವಾರ ನಗರದ ಕೋರ್ಟ್ ಸರ್ಕಲ್ ಬಳಿ ಜಮಾಗೊಂಡು ಪ್ರತ್ಯೇಕ ರಾಜ್ಯದ ಬಾವುಟದೊಂದಿಗೆ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ಮೆರವಣಿಗೆ ನಡೆಸಿದ 20ಕ್ಕೂ ಹೆಚ್ಚು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದರು.

ಕನ್ನಡ ರಾಜ್ಯೋತ್ಸವ ನಿಮಿತ್ತ ರಾಜ್ಯಾದ್ಯಂತ ಸಂಭ್ರಮದಲ್ಲಿರುವ ಕನ್ನಡಿಗರಿಗೆ ರಾಜ್ಯದಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆಯ ಸರಕಾರದ ಮುಂದಿಟ್ಟ ಹೋರಾಟಗಾರರು ಪ್ರತ್ಯೇಕ ರಾಜ್ಯ ರಚನೆಯ ಧ್ವಜವನ್ನು ಪ್ರದರ್ಶಿಸಿಸುವ ಮೂಲಕ ಸಣ್ಣ ಕೂಗು ತಟ್ಟುವಂತೆ ನಡೆದಿದೆ.

ಕಲ್ಯಾಣ ಕರ್ನಾಟಕವನ್ನು ಅಭಿವೃದ್ಧಿ ಮಾಡಲು ಸರ್ಕಾರ ಮೀನಮೇಷ ಎಣಿಸುತ್ತಿರುವುದರಿಂದ ಆಕ್ರೋಶಗೊಂಡ ಹೋರಾಟಗಾರರು ‘ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ’ಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದರು. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯಿಂದ ಪದಾಧಿಕಾರಿಗಳು ಸದಸ್ಯರ ನೇತೃತ್ವದಲ್ಲಿ ಸರದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸುತ್ತಾಗ ಪೊಲೀಸರು ಯುನೈಟೆಡ್ ಆಸ್ಪತ್ರೆಯ ಬಳಿ ತಡೆದು ನಿಲ್ಲಿಸಿದರು.

ಮಾರ್ಗ ಮಧ್ಯದಲ್ಲಿ 12ಕ್ಕೂ ಹೆಚ್ಚು ಜನ ಹೋರಾಟಗಾರರನ್ನು ಪೊಲೀಸರು ಬಂಧಿಸಿ ವಾಹನದಲ್ಲಿ‌ ಕರೆದುಕೊಂಡು ಹೋದರು. ಇದರಲ್ಲಿ ಸಮಿತಿ ಅಧ್ಯಕ್ಷ ಎಂ.ಎಸ್ .ಪಾಟೀಲ್, ಮುಖಂಡರಾದ ಉದಯಕುಮಾರ ಜೇವರ್ಗಿ, ವಿನೋದಕುಮಾರ ಜೇನೆವರಿ, ಲಕ್ಷ್ಮೀ ಕಾಂತ ಸ್ಚಾದಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *