New Year 2024: ಹೊಸ ವರ್ಷಾಚರಣೆಗೆ ಗೈಡ್‌ಲೈನ್ಸ್ ಹೊರಡಿಸಿದ ಬೆಂಗಳೂರು ಪೊಲೀಸ್; ನ್ಯೂಇಯರ್ ಗುಂಗಲ್ಲಿದ್ದವರಿಗೆ ಶಾಕ್!
ಬೆಂಗಳೂರು: ಹೊಸ ವರ್ಷ 2024ರ (New Year 2024) ಆಚರಣೆಗೆ ಕೌಂಟ್‌ಡೌನ್ ಶುರುವಾಗಿದ್ದು, ರಾಜ್ಯ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಸುಸೂತ್ರವಾಗಿ ಇರಲು ಮತ್ತು ಹೊಸ ವರ್ಷಾಚರಣೆ ಸರಾಗವಾಗಿ ನಡೆಯಲು ಗೈಡ್‌ಲೈನ್ಸ್ (New Year Guidelines 2024) ಹೊರಡಿಸಲಾಗಿದೆ.
ಬಿಬಿಎಂಪಿ ಮತ್ತು ರಾಜ್ಯ ಪೊಲೀಸ್ ಇಲಾಖೆ ಹೊರ ವರ್ಷಾಚರಣೆಗೆ ಗೈಡ್‌ಲೈನ್ಸ್ ಹೊರಡಿಸಿದ್ದು, ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಬೆಂಗಳೂರು ನಗರ ಪೊಲೀಸರು ಗೈಡ್‌ಲೈನ್ಸ್ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆಗೆ ಹೊರಡಿಸಿರುವ ಗೈಡ್‌ಲೈನ್ಸ್ ಪ್ರಕಾರ, ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ಗುಂಗಿನಲ್ಲಿದ್ದವರಿಗೆ ಲಗಾಮು ಬೀಳಲಿದೆ ಎಂದೇ ನಿರೀಕ್ಷಿಸಲಾಗಿದೆ.
ಪೊಲೀಸ್ ಇಲಾಖೆಯ ಗೈಡ್‌ಲೈನ್ಸ್ ಪ್ರಕಾರ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದ್ದು, ಡಿಸೆಂಬರ್ 31ರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಯಾಗಲಿದೆ.
ಈ ಬಾರೀ ಹೆಚ್ಚು ಸಿಸಿಟಿವಿ ಅಳವಡಿಕೆಗೆ ಪಾಲಿಕೆಗೆ ಸೂಚನೆ ನೀಡಲಾಗಿದ್ದು, ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಬಿಬಿಎಂಪಿ ಕೆಲಸ ಮಾಡಲಿದೆ. ಹೊಸ ವರ್ಷಾಚರಣೆ ಹೊರಡಿಸಿರುವ ಗೈಡ್ ಲೈನ್ ಬಗ್ಗೆ ಮಾಹಿತಿ ಕೊಟ್ಟಿರುವ ತುಷಾರ್ ಗಿರಿನಾಥ್, ಹೊಸ ವರ್ಷಾಚರಣೆ ದಿನ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಜೊತೆ ಸಾಥ್ ನೀಡೋದಾಗಿ ಪಾಲಿಕೆ ಆಯುಕ್ತರು ಹೇಳಿದ್ದಾರೆ.
ಗೈಡ್ ಲೈನ್ಸ್ ನಲ್ಲಿ ಏನಿದೆ?
- ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ
- ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್‌ಗಳು ಬಂದ್
- ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ
- ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್
- ಸೆಲೆಬ್ರೇಷನ್‌ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ
- ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ
- ಬಾರ್, ಪಬ್‌ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್‌ಗೆ ಸೂಚನೆ
- ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ
- ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ
- ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ
- ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ
ಒಟ್ಟಿನಲ್ಲಿ ಪೊಲೀಸ್ ಇಲಾಖೆಯ ಗೈಡ್‌ಲೈನ್ಸ್ ಪ್ರಕಾರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದ್ದು, ಡಿಸೆಂಬರ್ 31ರ ಮಧ್ಯರಾತ್ರಿಯಿಂದಲೇ ಈ ನಿಯಮ ಜಾರಿಯಾಗಲಿದೆ.