ಗೋದ್ರಾ ಮಾದರಿ ದಾಳಿ: ಹರಿಪ್ರಸಾದ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಡಿ.ಕೆ.ಸುರೇಶ್

ಚನ್ನಪಟ್ಟಣ (ಜ.05): ಪೊಲೀಸರು ಯಾರನ್ನು ಉದ್ದೇಶಪೂರ್ವಕವಾಗಿ ಬಂಧನ ಮಾಡಿಲ್ಲ. ಕೆಲ ದುರ್ಘಟನೆ ನಡೆಯಬಹುದು ಎಂಬ ಗುಮಾನಿ ಮೇಲೆ ಬಂಧನ ಮಾಡಲಾಗಿದೆ. ಇದು ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಕೈಗೊಂಡಿರುವ ಕ್ರಮ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಸರ್ಕಾರ ಕೆಲ ಕೆಲ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ ಎಂದು ಕರಸೇವಕರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಮೇಲಿನಂತೆ ಪ್ರತಿಕ್ರಿಯಿಸಿದರು.

ಹಳ್ಳಿ-ಹಳ್ಳಿಯಲ್ಲೂ ರಾಮಮಂದಿರ: ರಾಮಮಂದಿರ ನಿರ್ಮಾಣ ಭಾರತೀಯರ ದೊಡ್ಡ ಆಸೆಯಾಗಿದೆ. ಒಬ್ಬರು ಒಂದು ಕಡೆ ರಾಮಮಂದಿರ ನಿರ್ಮಾಣ ಮಾಡಬೇಕು ಅಂತ. ಮತ್ತೊಬ್ಬರು ದೇಶದಲ್ಲೆಡೆ ರಾಮಮಂದಿರ ನಿರ್ಮಾಣ ಮಾಡಬೇಕು ಅಂತಾರೆ. ಅದರೆ, ಹಳ್ಳಿ ಹಳ್ಳಿಗಳಲ್ಲೂ ರಾಮಮಂದಿರ ಆಗಬೇಕು ಅನ್ನೋದು ನಮ್ಮ ಉದ್ದೇಶ. ಆದರೆ ಕೆಲವರು ಪ್ರಚಾರಕ್ಕೆ ಇದನ್ನು ಬಳಸಿಕೊಳ್ಳುತ್ತಾರೆ. ರಾಮಮಂದಿರ ಉದ್ಘಾಟನೆಗೆ ನನಗೆ ಆಹ್ವಾನ ಬಂದಿಲ್ಲ. ಆಹ್ವಾನ ಬಂದರೆ ನೋಡೊಣ ಎಂದರು.

ಗೋದ್ರಾ ಮಾದರಿ ದುರಂತ ಎಂಬ ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರಕ್ಕೆ, ಇವತ್ತು ಅಯೋಧ್ಯೆ ವಿವಾದಾತ್ಮಕ ಕ್ಷೇತ್ರ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಆಗಿದೆ. ರಾಮಮಂದಿರಕ್ಕೂ ರಕ್ಷಣೆ ಬೇಕು, ಭಕ್ತರಿಗೂ ರಕ್ಷಣೆ ಕೊಡಬೇಕು. ಏನೇ ಇದ್ರೂ ರಕ್ಷಣೆ ಕೊಡುವುದು ಸರ್ಕಾರದ ಕರ್ತವ್ಯ. ಆ ದೃಷ್ಟಿಯಿಂದ ಹರಿಪ್ರಸಾದ್ ಅವರು ಹೇಳಿದ್ದಾರೆ ಎಂದು ಹರಿಪ್ರದಾಸ್ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಲು ಹೋರಾಟ ಮಾಡಬೇಕು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ, ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ನಾನು ಊರಿನಲ್ಲಿ ಇರಲಿಲ್ಲ, ಮಾಹಿತಿ ತಿಳಿದುಕೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್.ಆರ್. ಪ್ರಮೋದ್, ಸುನೀಲ್ ಕುಮಾರ್, ರಾಜ್ಯ ಕುಕ್ಕುಟ ಮಹಾಮಂಡಳದ ಅಧ್ಯಕ್ಷ ಡಿ.ಕೆ.ಕಾಂತರಾಜು, ಮುಖಂಡರಾದ ಎ.ಸಿ.ವೀರೇಗೌಡ, ಬೋರ್‌ವೆಲ್ ರಂಗನಾಥ್, ಪಿ.ಡಿ.ರಾಜು, ನಾಗೇಂದ್ರ, ಚಂದ್ರಸಾಗರ್, ಕರಣ್ ಆನಂದ್, ಕೋಕಿಲಾ ರಾಣಿ ಇತರರಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *