Lokayukta Raid: ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

ತುಮಕೂರು: ತುಮಕೂರಿನಲ್ಲಿ (Tumaluru) ಲಂಚ (Bribe) ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ತಹಶೀಲ್ದಾರ್ (Tahsildar). ಗೀತಾ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಆಗಿದ್ದು, ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗ್ರಾಮದ ರೈತ (Farmer) ಮಲ್ಲಿಕಾರ್ಜುನ್​ಗೆ ಸೇರಿದ‌ 33 ಗುಂಟೆ ಜಮೀನನ್ನ ಭೂ ಪರಿವರ್ತನೆ (Land conversion) ಮಾಡಿಕೊಡಲು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ. ನಿನ್ನೆ ಬೆಳಗ್ಗೆ 20 ಸಾವಿರ ಹಣ ರೂಪಾಯಿ ಪಡೆದಿದ್ದ ತಹಶೀಲ್ದಾರ್ ಗೀತಾ, ನಿನ್ನೆ ಸಂಜೆ 30 ಸಾವಿರ ರೂಪಾಯಿ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.

ಮನೆಗೆ ಕರೆಸಿಕೊಂಡು ತಹಶೀಲ್ದಾರ್ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ. ತುಮಕೂರು ಲೋಕಾಯುಕ್ತ ಡಿವೈಎಸ್ ಪಿ ರಾಮಕೃಷ್ಣ ಹಾಗೂ ಉಮಾಶಂಕರ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ, ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಗೀತಾರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಲಂಚಬಾಕ ಅಧಿಕಾರಿಯನ್ನುವಿಚಾರಣೆಯನ್ನು ಲೋಕಾಯುಕ್ತ ಅಧಿಕಾರಿಗಳು ಮುಂದುವರಿಸಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ತಾಲೂಕಿನ ಅರಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್​​ಹ್ಯಾಂಡ್​ ಆಗಿ ಸಿಕ್ಕಿ ಬಿದ್ದಿದ್ದಾರೆ. ಆರೋಪಿ ಪಿಡಿಒ ಶಿವಾನಂದ, ನಾಗರಾಜು ಎನ್ನುವರ ನಿವೇಶನದ ಇ ಖಾತೆ ಮಾಡಿಸಲು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರಂತೆ.

ಆದರೆ ಆ ಬಳಿಕ ಮಾತುಕತೆ ನಡೆಸಿ 10 ಸಾವಿರ ಲಂಚ ನೀಡಲು ಕೇಳಿದ್ದರಂತೆ. ಇದರಂತೆ ಐದು ಸಾವಿರ ರೂಪಾಯಿ ಹಣವನ್ನು ಫೋನ್ ಪೇ ಮೂಲಕ ಪಡೆದುಕೊಂಡಿದ್ದಾರೆ. ಉಳಿದ ಐದು ಸಾವಿರ ರೂಪಾಯಿ ಹಣವನ್ನು ನಗದು ರೂಪದಲ್ಲಿ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಎಸ್​​ ಪಿ ಉಮೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ವಿಚಾರಣೆ ನಂತರ ಪಿಡಿಒ ಶಿವಾನಂದ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೋಲಾರ ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನಕಣ್ಣು

ಲೋಕಸಭಾ ಚುನಾವಣೆ ಘೋಷಣೆ ಹಿನ್ನೆಲೆ, ಕೋಲಾರ-ಬೆಂಗಳೂರು ಗ್ರಾಮಾಂತರ ಪ್ರದೇಶಗಳ ಗಡಿಯಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟು ಚುನಾವಣಾ ಅಕ್ರಮ ನಡೆಯದಂತೆ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಮಾಲೂರು ಸರ್ಜಾಪುರ ಗಡಿಯಲ್ಲಿ ಚಿಕ್ಕತಿರುಪತಿ ಪಂಚಾಯ್ತಿಯಿಂದ ಚೆಕ್ ಪೋಸ್ಟ್ ಸ್ಥಾಪಿಸಲಾಗಿದ್ದು, ಚೆಕ್‌ಪೋಸ್ಟ್‌‌ನಲ್ಲಿ ವಾಹನಗಳ ತಪಾಸಣೆಯನ್ನು ಮಾಲೂರು ಪೋಲೀಸರು ಕೈಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ, ನಗರ ಜಿಲ್ಲೆಗಳಿಂದ ಕೋಲಾರ ಜಿಲ್ಲೆಗೆ ಬರುವ ವಾಹನಗಳನ್ನು ತಡೆದು ತಪಾಸಣೆ ಮಾಡಲಾಗ್ತಿದೆ. ಚೆಕ್ ಪೋಸ್ಟ್ ಗಳಲ್ಲಿ ಸಿಸಿಟವಿ ಅಳವಡಿಕೆ ಮಾಡಲಾಗಿದ್ದು, ವಾಹನ ತಡೆದು ತಪಾಸಣೆ ಮಾಡ್ತಿರೊದಕ್ಕೆ ಕೆಲ ವಾಹನ ಸವಾರರಿಗೆ ಸಮಯ ವ್ಯರ್ಥವಾಗುತ್ತಿದ್ದು ಬೇಸರ ಹೊರಹಾಕಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *