Congress Star Campaigner: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ, ಲಿಸ್ಟ್ನಲ್ಲಿ ಯಾರ್ಯಾರಿದ್ದಾರೆ ಗೊತ್ತಾ?
ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election 2024) ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಮತದಾರರನ್ನು ಓಲೈಸಲು ಎಲ್ಲಾ ಪಕ್ಷಗಳು ಪ್ರಚಾರ ಕಾರ್ಯ ಶುರು ಮಾಡಿದ್ದು, (Election Campaign) ಈ ಬಾರಿ ಗೆಲ್ಲಲೇಬೇಕೆಂಬ ಪಣತೊಟ್ಟು ಮೂರೂ ಪಕ್ಷಗಳು ರಾಜ್ಯದಲ್ಲಿ ಕ್ಯಾಂಪೇನ್ ಶುರು (Congress Star Campaigner) ಮಾಡಿದೆ.
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ರಾಷ್ಟ್ರೀಯ ನಾಯಕರನ್ನು ಚುನಾವಣಾ ಪ್ರಚಾರಕ್ಕಾಗಿ ವಿವಿಧ ರಾಜ್ಯಗಳಿಗೆ ಕಳುಹಿಸಿದ್ದು, ಈಗಾಗಲೇ ಆಡಳಿತಾರೂಢ ಬಿಜೆಪಿ ಪಕ್ಷ ತನ್ನ ಸ್ಟಾರ್ ಪ್ರಚಾರಕರ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ. ಈತನ್ಮಧ್ಯೆ ಕಾಂಗ್ರೆಸ್ ಪಕ್ಷ ಕೂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯಾದ್ಯಂತ ಲೋಕಸಭಾ ಚುನಾವಣೆ ಪ್ರಚಾರ ಮಾಡಲು ಕಾಂಗ್ರೆಸ್ ಹೈಕಮಾಂಡ್ ಸ್ಟಾರ್ ಪ್ರಚಾರಕರ ಲಿಸ್ಟ್ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ.
ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ.
ಕಾಂಗ್ರೆಸ್ ಲೋಕಸಭಾ ಚುನಾವಣೆಯ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಿಂದ ಹಿಡಿದು ಅನೇಕ ರಾಜ್ಯ ನಾಯಕರ ಹೆಸರಿದೆ. ಆ ಪೈಕಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಪ್ರಿಯಾಂಕ ಗಾಂಧಿ, ರಣದೀಪ್ ಸುರ್ಜೆವಾಲಾ, ವೀರಪ್ಪ ಮೊಯ್ಲಿ, ಬಿವಿ ಶ್ರೀನಿವಾಸ್, ಲಕ್ಷ್ಮಣ ಸವದಿ, ಈಶ್ವರ್ ಖಂಡ್ರೆ, ವಿನಯಕುಮಾರ್ ಸೊರಕೆ, ಬಿಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಡಾ.ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಎಂಬಿ ಪಾಟೀಲ್ ಸಹ ಸೇರಿದ್ದಾರೆ.
ಇನ್ನು, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಚ್ ಎಂ ರೇವಣ್ಣ, ಪಿಜಿ ಆರ್ ಸಿಂಧ್ಯಾ, ಬಿ ಸೋಮಶೇಖರ್, ಎಲ್ ಹನುಮಂತಯ್ಯ, ಜಿಸಿ ಚಂದ್ರಶೇಖರ, ಸೈಯದ್ ನಾಸಿರ್ ಹುಸೇನ್, ಅಭಿಷೇಕ್ ದತ್, ಜಮೀರ್ ಅಹಮದ್ ಖಾನ್, ಮಧು ಬಂಗಾರಪ್ಪ, ಪಿಟಿ ಪರಮೇಶ್ವರ್ ನಾಯಕ್, ವಿ ಎಸ್ ಉಗ್ರಪ್ಪ, ಸತೀಶ್ ಜಾರಕಿಹೊಳಿ, ತನ್ವೀರ್ ಸೇಠ್, ಪುಷ್ಪಾ ಅಮರನಾಥ್, ಉಮಾಶ್ರೀ, ಕೆ.ಸಿ.ವೇಣುಗೋಪಾಲ್ ಸಹ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ವರ್ಗಾವಣೆ
ಬೆಂಗಳೂರು: ಉತ್ತರಕನ್ನಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ (Anjali Nimbalkar) ಪತಿ, ವಾರ್ತಾ ಇಲಾಖೆ ಆಯುಕ್ತರಾಗಿದ್ದ ಹೇಮಂತ್ ನಿಂಬಾಳ್ಕರ್ (Hemnath Nimbalkar) ಅವರನ್ನು ವರ್ಗಾವಣೆ ಮಾಡಿದ ಸರ್ಕಾರ ಆದೇಶ ಹೊರಡಿಸಿದೆ.
ಚುನಾವಣೆ ಅಭ್ಯರ್ಥಿಯ ಪತಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಇಲಾಖೆಯಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ಚುನಾವಣೆ ಆಯೋಗಕ್ಕೆ (Election Commission) ದೂರು ನೀಡಿತು. ದೂರಿನ ಹಿನ್ನೆಲೆ ಹೇಮಂತ್ ನಿಂಬಾಳ್ಕರ್ ಅವರ ವರ್ಗಾವಣೆಯಾಗಿದ್ದು, ವಾರ್ತಾ ಇಲಾಖೆಯ ನೂತನ ಆಯುಕ್ತರನ್ನಾಗಿ ಸೂರಳ್ಕರ್ ವಿಕಾಸ್ ಕಿಶೋರ್ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸೂರಳ್ಕರ್ ವಿಕಾಸ್ ಕಿಶೋರ್, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದರು.
ವಾರ್ತಾ ಇಲಾಖೆ ಆಯುಕ್ತರಿಗಾರುವ ಅಂಜಲಿ ನಿಂಬಾಳ್ಕರ್ ಪತಿ ಹೇಮಂತ್ ನಿಂಬಾಳ್ಕರ್ ಸರ್ಕಾರಿ ಕಚೇರಿಯಲ್ಲಿ ಕೂತು ಪತ್ನಿ ಪರ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ವರ್ಗಾಯಿಸಿ, ರಾಜ್ಯದ ಹೊರಗಡೆ ನಿಯುಕ್ತಿ ಮಾಡುವಂತೆ ಬಿಜೆಪಿ ನಿಯೋಗ ಚುನಾವಣೆ ಆಯೋಗಕ್ಕೆ ದೂರು ನೀಡಿತ್ತು.