5 ಲಕ್ಷ ಲಂಚಕ್ಕೆ ಬೇಡಿಕೆ; ರೆಡ್‌ಹ್ಯಾಂಡ್ ಆಗಿ ʼಲೋಕಾʼ ಬಲೆಗೆ ಬಿದ್ದ PSI & ಪೇದೆ..!

ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಡಸ ಠಾಣೆ PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ.

ತಡಸ ಠಾಣೆ PSI ಶರಣ ಬಸಪ್ಪ ಮತ್ತು ಪೇದೆ ಸುರೇಶ್‌ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದವರು. ಗ್ಯಾಂಬಲಿಂಗ್‌ಗೆ ಅನುಮತಿ ನೀಡಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಸ್ಪೀಟ್ ಆಡಿಸಲು ಪ್ರಭಾಕರ್ ಎನ್ನುವವರಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. PSI ಶರಣ ಬಸಪ್ಪ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿದೆ.

ಮಾಹಿತಿ ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, PSI ಮತ್ತು ಪೇದೆಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಇಬ್ಬರನ್ನೂ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *