Karnataka Lok Sabha Election Result 2024: ರಾಜ್ಯದಲ್ಲಿ ಅಂಚೆ ಮತಗಳ ಎಣಿಕೆ ಮುಕ್ತಾಯ- 11 ಕ್ಷೇತ್ರಗಳಲ್ಲಿ BJP ಮುನ್ನಡೆ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಂಚೆ ಮತಗಳ ಎಣಿಕೆಯನ್ನು ಮೊದಲು ಕೈಗೆತ್ತಿಕೊಂಡಿದ್ದರಿಂದ ಬಿಜೆಪಿ 11 ಸ್ಥಾನಗಳಲ್ಲಿ, ಕಾಂಗ್ರೆಸ್ 4 ಮತ್ತು ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುಂದಿದೆ. ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ಬಿಜೆಪಿ) ಕ್ರಮವಾಗಿ ಮಂಡ್ಯ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಮುಂದಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯದ 29 ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಯಿತು. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಅತ್ಯಂತ ಪ್ರಮುಖ ರಾಜ್ಯವಾಗಿದೆ. ಏಕೆಂದರೆ ಈ ಹಿಂದೆ ಬಿಜೆಪಿ ಇಲ್ಲಿ ಮಾತ್ರ ಅಧಿಕಾರವನ್ನು ಹೊಂದಿತ್ತು.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಒಟ್ಟು 28 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆದ್ದಿದೆ. ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನೇತೃತ್ವದ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಜಯಭೇರಿ ಬಾರಿಸಿತ್ತು. ಆಗ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ ನಡೆಸುತ್ತಿದ್ದು, ಒಟ್ಟಾಗಿ ಚುನಾವಣೆ ಎದುರಿಸಿದ್ದವು.
ಪ್ರಾದೇಶಿಕ ಸಂಘಟನೆ ಜೆಡಿಎಸ್ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಸೇರಿತು. ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿತು. ಮಂಡ್ಯ, ಹಾಸನ ಮತ್ತು ಕೋಲಾರದಲ್ಲಿ ಮೂರು ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸುತ್ತಿದೆ.