ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು; ರಾಜ್ಯಾದ್ಯಂತ ಹೈ ಅಲರ್ಟ್

ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಪ್ರಟಕವಾಗುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ರಾಜ್ಯದ ಇತರ ಜಿಲ್ಲೆಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

ಬೆಂಗಳೂರು: ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪು ಬುಧವಾರ ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ಬುಧವಾರ ವಿಶೇಷ ನ್ಯಾಯಾಲಯ ಪ್ರಕಟಿಸಲಿದೆ. ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ ಅಡ್ವಾಣಿ, ಮರಳಿ ಮನೋಹರ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್ ಸೇರಿದಂತೆ 32 ಮಂದಿ ಆರೋಪಿಗಳ ಭವಿಷ್ಯ ಬುಧವಾರ ನಿರ್ಧಾರವಾಗಲಿದೆ.

ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು, ಪ್ರತಿಭಟನೆಗಳು, ಸಂಭ್ರಮಾಚರಣೆಗಳು ನಡೆಯುವ ಸಾಧ್ಯತೆ ಹೆಚ್ಚಾಗಿದೆ. ಈ ಕಾರಣದಿಂದ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಇತ್ತೀಚೆಗೆ ಕೆ.ಜಿ ಹಳ್ಳಿ ಡಿಜೆ ಹಳ್ಳಿ ಗಲಭೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ನಿಗಾ ಇಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್‌ಗೆ ಕ್ರಮ ಕೈಗೊಳ್ಳುವಂತೆ ನಗರದ ಎಲ್ಲಾ ವಿಭಾಗದ ಡಿಸಿಪಿಗಳಿಗೆ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಅಷ್ಟೇ ಅಲ್ಲದೆ ರಾಜ್ಯದ ಇತರ ಜಿಲ್ಲೆಗಳಾದ ಮಂಗಳೂರು, ಮಡಿಕೇರಿ, ಹುಬ್ಬಳ್ಳಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲೂ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *