ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕಾರ

ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ (Priyanka Gandhi) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿದ್ದಾರೆ. ಅವರ ತಾಯಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ.

ನ.23 ರಂದು ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್‌ನಿಂದ ಭಾರಿ ಅಂತರದ ಗೆಲುವು ದಾಖಲಿಸಿದರು. ಅವರು 6.22 ಲಕ್ಷ ಮತಗಳನ್ನು ಪಡೆದರು. ಎರಡನೇ ಸ್ಥಾನದಲ್ಲಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸತ್ಯನ್ ಮೊಕೇರಿಗಿಂತ ನಾಲ್ಕು ಲಕ್ಷಕ್ಕಿಂತ ಹೆಚ್ಚು ಮತ್ತು ಬಿಜೆಪಿಯ ನವ್ಯಾ ಹರಿದಾಸ್‌ಗಿಂತ 5.12 ಲಕ್ಷ ಹೆಚ್ಚು ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಯನಾಡ್‌ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಥಿಸಿ ಗೆದ್ದಿದ್ದರು. ಕೊನೆಗೆ ವಯನಾಡ್‌ ಕ್ಷೇತ್ರವನ್ನು ಬಿಟ್ಟರು. ಅವರಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *