Donald Trump Inauguration: ಪ್ರಮಾಣ ವಚನಕ್ಕೂ ಮುನ್ನವೇ ಡೊನಾಲ್ಡ್ ಟ್ರಂಪ್ ಭೇಟಿಯಾಗಿ ಅಭಿನಂದಿಸಿದ ಮುಕೇಶ್, ನೀತಾ ಅಂಬಾನಿ
ನ್ಯೂಯಾರ್ಕ್: ಅಮೆರಿಕಾದ (US President) ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಪಟ್ಟಾಭಿಷೇಕಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಭಾರತೀಯ ಕಾಲಮಾನ ರಾತ್ರಿ 10.30ರ ಸುಮಾರಿಗೆ ಟ್ರಂಪ್ ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿಗೆ ಪ್ರಮಾಣ ವಚನ (Oath Ceremony) ಸ್ವೀಕರಿಸಲಿದ್ದಾರೆ.
ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ವಿಶ್ವದ ಅನೇಖ ಗಣ್ಯರು ಪಾಲ್ಗೊಳ್ಳುತ್ತಿದ್ದು, ಇದೀಗ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕ-ಅಧ್ಯಕ್ಷೆ ನೀತಾ ಅಂಬಾನಿ ಅವರು ಕೂಡ ಯುಎಸ್ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೇ, ಇಂದು ನಡೆಯುವ ಟ್ರಂಪ್ ಅವರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಉದ್ಘಾಟನಾ ಸಮಾರಂಭ ಭಾರತೀಯ ಕಾಲಮಾನ ಪ್ರಕಾರ ಇಂದು ರಾತ್ರಿ 10.30ರ ಸುಮಾರಿಗೆ ನಡೆಯಲಿದ್ದು, ವೀಶೇಷ ಸಂಗತಿ ಎಂದರೆ ಟ್ರಂಪ್ ಪ್ರಮಾಣ ವಚನ ಕೇವಲ 35 ಪದಗಳನ್ನು ಒಳಗೊಂಡಿದೆ. ಟ್ರಂಪ್ ಅವರು ಈ ರೀತಿ ಪ್ರಮಾಣವಚನ ಸ್ವೀಕರಿಸಲಿಸದ್ದಾರೆ. ‘ನಾನು ಯುನೈಟೆಡ್ ಸ್ಟೇಟ್ಸ್‌ನ ಅಧ್ಯಕ್ಷರ ಹುದ್ದೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಮತ್ತು ನನ್ನ ಸಾಮರ್ಥ್ಯದ ಅತ್ಯುತ್ತಮವಾಗಿ ಯುನೈಟೆಡ್ ಸ್ಟೇಟ್ಸ್‌ನ ಸಂವಿಧಾನವನ್ನು ಸಂರಕ್ಷಿಸಿ, ರಕ್ಷಿಸುತ್ತೇನೆ ಮತ್ತು ರಕ್ಷಿಸುತ್ತೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ.’
ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಶ್ವದಾದ್ಯಂತದ ಪ್ರಸಿದ್ಧ ವ್ಯಕ್ತಿಗಳು ಭಾಗವಹಿಸಲಿದ್ದಾರೆ. ಇವರಲ್ಲಿ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರಿಂದ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ, ಚೀನಾದ ಕಡೆಯಿಂದ ಉಪಾಧ್ಯಕ್ಷ ಹಾನ್ ಜೆಂಗ್ ಪ್ರಮಾಣ ವಚನದಲ್ಲಿ ಭಾಗವಹಿಸಲಿದ್ದಾರೆ.
ಇದಲ್ಲದೆ, ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲ್ಲಿ, ಈಕ್ವೆಡಾರ್ ಅಧ್ಯಕ್ಷ ಡೇನಿಯಲ್ ನೊಬೋವಾ, ಎಲ್ ಸಾಲ್ವಡಾರ್ ಅಧ್ಯಕ್ಷ ನಯೀಬ್ ಬುಕೆಲೆ, ಬ್ರೆಜಿಲ್ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ, ಹಂಗೇರಿಯ ಪ್ರಧಾನಿ ವಿಕ್ಟರ್ ಓರ್ಬನ್, ಪೋಲೆಂಡ್ನ ಮಾಜಿ ಪ್ರಧಾನಿ ರೈಟ್ವಿಂಗ್ ಮೊರಾವೈಸ್ ಪಕ್ಷದ ನಾಯಕ ನಿಗೆಲ್ ಫರಾಜ್ ಪಾಲ್ಗೊಳ್ಳಲಿದ್ದಾರೆ. ಇದಲ್ಲದೇ ಅಮೆರಿಕದ ಮಾಜಿ ಅಧ್ಯಕ್ಷ ಜೋ ಬಿಡೆನ್‌ನಿಂದ ಬರಾಕ್ ಒಬಾಮಾ ಮತ್ತು ಜಾರ್ಜ್ ಡಬ್ಲ್ಯೂ ಬುಷ್ ಕೂಡ ಸೇರ್ಪಡೆಯಾಗಲಿದ್ದಾರೆ.
ನಿನ್ನೆ ಟ್ರಂಪ್ ಔತಣಕೂಟದ ಸಮಯದಲ್ಲಿ ಕ್ಲಿಕ್ ಮಾಡಲಾದ ಚಿತ್ರಗಳು ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋದಲ್ಲಿ ಮುಕೇಶ್ ಅಂಬಾನಿ ಕಪ್ಪು ಸೂಟ್ ಧರಿಸಿ ಕಾಣಿಸಿಕೊಂಡಿದ್ದರೆ, ನೀತಾ ಅಂಬಾನಿ ಓವರ್ ಕೋಟ್ ಮತ್ತು ಪಚ್ಚೆಯೊಂದಿಗೆ ಕಪ್ಪು ಸೀರೆಯನ್ನು ಉಟ್ಟಿರೋದು ಕಾಣುತ್ತಿದೆ. ರಿಯಲ್ ಎಸ್ಟೇಟ್ ಉದ್ಯಮಿ ಕಲ್ಪೇಶ್ ಮೆಹ್ತಾ ದಂಪತಿಗಳೊಂದಿಗಿನ ಚಿತ್ರಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ.