ಪ್ರಯಾಣ ದರ ತಗ್ಗಿಸಿ ಪ್ರಯಾಣಿಕರ ಹಿತ ಕಾಪಾಡಿ: ಮೆಟ್ರೊ MDಗೆ ಸಿಎಂ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ನಮ್ಮ ಮೆಟ್ರೊ ಪ್ರಯಾಣ ದರ ಏರಿಕೆಯಾಗಿರುವುದು ರಾಜಧಾನಿ ಜನರನ್ನು ಹೈರಾಣಾಗಿಸಿದೆ. ಪ್ರತಿನಿತ್ಯ ಕಚೇರಿಗೆ, ವ್ಯವಹಾರಕ್ಕೆ ಮೆಟ್ರೊದಲ್ಲಿ ಸಂಚರಿಸುತ್ತಿದ್ದವರು ಅದಕ್ಕಿಂತ ನಮ್ಮ ಟೂ ವೀಲರೇ ಬೆಸ್ಟ್ ಎಂದು ಸ್ವಂತ ಗಾಡಿಯಲ್ಲಿ ಓಡಾಡುವ ಪರಿಸ್ಥಿತಿ ಬಂದಿದೆ.

ಮೆಟ್ರೊ ಪ್ರಯಾಣ ದರ ಏರಿಸಿದ್ದು ಕೇಂದ್ರ ಸರ್ಕಾರ ಎನ್ನುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಸ್ಯೆ ಕುರಿತು ಇದೀಗ ಮಧ್ಯ ಪ್ರವೇಶಿಸಿದ್ದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ(BMRCL) ವ್ಯವಸ್ಥಾಪಕ ನಿರ್ದೇಶಕ ಎಂ ಮಹಾಬಲೇಶ್ವರ ರಾವ್ ಅವರ ಜೊತೆ ಮಾತನಾಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಸಿಎಂ, ಮೆಟ್ರೊ ಪ್ರಯಾಣ ದರ ಪರಿಷ್ಕರಣೆ ಜಾರಿಯಲ್ಲಿ ಕೆಲವು ಸ್ಟೇಜ್ ಗಳಲ್ಲಿ ದರಗಳು ದ್ವಿಗುಣಗೊಂಡಿವೆ. ಇದು ವೈಪರೀತ್ಯಗಳಿಗೆ ಕಾರಣವಾಗಿದೆ. ಈ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಲು ಮತ್ತು ದರಗಳನ್ನು ಕಡಿಮೆ ಮಾಡಲು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ ಎಂಡಿ ಅವರನ್ನು ಕೇಳಿದ್ದೇನೆ. ಪ್ರಯಾಣಿಕರ ಹಿತ ಕಾಪಾಡುವುದು ಮುಖ್ಯ ಎಂದು ಅವರಿಗೆ ಮನವರಿಕೆ ಮಾಡಿದ್ದೇನೆ ಎಂದಿದ್ದಾರೆ.

ಮೆಟ್ರೊ ದರ ಏರಿಕೆ ಬಗ್ಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್, ಬಿಜೆಪಿಯವರಿಗೆ ರಾಜಕೀಯ ಹೊರತುಪಡಿಸಿ ಬೇರೇನೂ ಗೊತ್ತಿಲ್ಲ, ಮೆಟ್ರೊ ಯೋಜನೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಶೇಕಡಾ 50:50 ಅನುಪಾತದಲ್ಲಿ ಮಾಡಲಾಗುತ್ತದೆ. ದರ ಏರಿಕೆಗೆ ಒಂದು ಸಮಿತಿ ಮಾಡಲಾಗಿದೆ. ಕೇಂದ್ರ ಸರ್ಕಾರ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ಮಾಡಿರುತ್ತಾರೆ. ಆ ಸಮಿತಿಯ ತೀರ್ಮಾನ ನಮ್ಮ ಗಮನಕ್ಕೆ ಬರುವುದಿಲ್ಲ. ದರ ಏರಿಕೆ ತೀರ್ಮಾನ ಅವರು ಮಾಡಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ ಎಂದಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *