Terrorist Encounter: ಪಹಲ್ಗಾಮ್ ದಾಳಿ ಬೆನ್ನಲ್ಲೇ ಕಣಿವೆ ನಾಡಿನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿ (Pahalgam Terrorist Attack) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಈ ದಾಳಿಯಲ್ಲಿ ಭಾರತೀಯರು ಸೇರಿ ಸುಮಾರು 26 ಮಂದಿ ಸಾವನಪ್ಪಿದ್ದಾರೆ (26 Death). ಹೀಗಿರುವಾಗ ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ (Baramulla) ಮತ್ತೆ ಗುಂಡಿನ ಚಕಮಕಿ ನಡೆದಿದೆ. ಬಾರಾಮುಲ್ಲಾದ ಉರಿ ನಾಲಾದಲ್ಲಿ (Uri Nala of Baramulla) ಸುಮಾರು ಎರಡು-ಮೂರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವಾಗ ಬುಧವಾರ ಎನ್‌ಕೌಂಟರ್ ನಡೆದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ಸೋಮವಾರ ತಿಳಿಸಿದೆ. ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಈ ಕಾರ್ಯಾಚರಣೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾದ ಉರಿ ನಾಲಾದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಉಡೀಸ್
ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಹೇಯ ಕೃತ್ಯ ಇನ್ನೂ ಭಾರತೀಯರ ಕಣ್ಣು ಕೆಂಪಾಗಿಸಿದೆ. ಹೀಗಿರುವಾಗ ಮತ್ತೊಮ್ಮೆ ಕೆಲ ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಸಾಮಾನ್ಯ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದ್ದಾರೆ. ಇದನ್ನು ಕಂಡ ಭಾರತೀಯ ಸೇನೆ ಸುಮಾರು ಎರಡು-ಮೂರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವಾಗ ಬುಧವಾರ ಎನ್‌ಕೌಂಟರ್ ಮಾಡಲಾಗಿದೆ ಎಂದು ತಿಳಿಸಿದೆ.