ಮಲ್ಲಿಕಾರ್ಜುನ ಖರ್ಗೆ ಅವರಿಗೆ ‘ಭಾರತ ರತ್ನ’ ಘೋಷಿಸುವಂತೆ ಕಮಕನೂರ್ ಒತ್ತಾಯ

ಕಲಬುರಗಿ: ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ್ ಅವರು ಕೇಂದ್ರ ಸರಕಾರಕ್ಕೆ ಒತ್ತಾಯಿಸಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ವನಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದ್ಧ ಬಸವ ಅಂಬೇಡ್ಕರ್ ಅವರ ಇತಿಹಾಸವನ್ನು ನಾವು ಓದುತ್ತಿದ್ದೇವೆ, ಅದರಂತೆಯೇ ಈಗ ನಾವು ಕಲಬುರಗಿಯ ಇತಿಹಾಸ ನಿರ್ಮಾಣ ಮಾಡಿದ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆಯೂ ಓದಬೇಕಿದೆ. ಅಂತಹ ಶ್ರೇಷ್ಠ ನಾಯಕರಿಗೆ ದೇಶದ ಮಹೋನ್ನತ ಪ್ರಶಸ್ತಿ ಆಗಿರುವ ‘ಭಾರತ ರತ್ನ’ ನೀಡಬೇಕು, ಇದಕ್ಕೆ ಅವರು ಅರ್ಹ ವ್ಯಕ್ತಿಯಾಗಿದ್ದಾರೆ ಎಂದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ, ಅವಿರತ ಶ್ರಮಿಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ದಿನಗಳಲ್ಲಿ ಪ್ರಧಾನ ಮಂತ್ರಿ, ದೇಶದ ರಾಷ್ಟ್ರಪತಿ ಆಗಬೇಕು ಇದು ನಮ್ಮೆಲ್ಲರ ಬಯಕೆ ಇದೆ. ಆದಷ್ಟು ಬೇಗ ಈಡೇರಲಿ ಎಂದು ವೇದಿಕೆಯಲ್ಲಿ ಪ್ರಾರ್ಥಿಸಿದ್ದಾರೆ.

ವೇದಿಕೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರ ಶಾಸಕರು ಇದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *