ನಶಾಮುಕ್ತ ಭಾರತ ಅಭಿಯಾನ ಯೋಜನೆಯ 5ನೇ ವಾರ್ಷಿಕೋತ್ಸವ ಆಚರಣೆ ಕುರಿತು ಅರಿವು ಕಾರ್ಯಕ್ರಮ

ಕಲಬುರಗಿ, ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಇವುಗಳ ಸಂಯುಕ್ತಾಶ್ರಯದಲ್ಲಿ ನಶಾಮುಕ್ತ ಭಾರತ ಅಭಿಯಾನ ಯೋಜನೆಯ 5ನೇ ವಾರ್ಷಿಕೋತ್ಸವದ ಆಚರಣೆ ಕುರಿತು ಅರಿವಿನ ಕಾರ್ಯಕ್ರಮವನ್ನು ಕಲಬುರಗಿ ನಗರದ ಎಮ್.ಐ.ಎಸ್. ಡಿಗ್ರಿ ಕಾಲೇಜಿನಲ್ಲಿ ಬುಧವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮಲ್ಲಿ ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಮನೋವೈದ್ಯರಾದ ಡಾ. ಮಹಮ್ಮದ್ ಇರ್ಫಾನ್ ಮಹಾಗಾವಿ ಅವರು ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳು, ಚಿಕಿತ್ಸೆ, ಚಿಕಿತ್ಸೆ ಸೌಲಭ್ಯಗಳ ಕುರಿತು ವಿಸ್ತಾರವಾಗಿ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು.

ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ವಿವೇಕಾನಂದ ರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದರು. ಪ್ರಾಂಶುಪಾಲರಾದ ಪೆÇ್ರ. ಮಲ್ಲಪ್ಪ ಬೋತಗಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಡಾ. ಪ್ರಾಣೇಶ್ ಎಸ್ ಅವರು ಉಪಸ್ಥಿತರಿದ್ದರು

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *