ಉತ್ತರ ಪ್ರದೇಶದಂತೆ ಕರ್ನಾಟಕ ಸರ್ಕಾರ ‘ಬುಲ್ಡೋಜರ್ ನೀತಿ’ ಅನುಸರಿಸುತ್ತಿದೆ: ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಗ್ರಾಮದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳನ್ನು ನೆಲಸಮ ಮಾಡಿರುವುದು ತುಂಬಾ ದುಃಖಕರ ವಿಚಾರ, ಅಲ್ಲಿ ಮುಸ್ಲಿಂ ಕುಟುಂಬಗಳು ಹಲವು ವರ್ಷಗಳಿಂದ ವಾಸಿಸುತ್ತಿದ್ದವು. ಇದೀಗ ಏಕಾಏಕಿ ಈ ಚಳಿಗಾಲದಲ್ಲಿ ಮನೆಗಳನ್ನು ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಈ ಚಳಿಯಲ್ಲಿ ಮಕ್ಕಳ, ಮಹಿಳೆಯರನ್ನು ಬೀದಿಗೆ ಹಾಕಿದ್ದಾರೆ ಎಂದು ಕೇರಳ ಮುಖ್ಯಮಂತ್ರಿಗಳು ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನಲ್ಲಿ ವರ್ಷಗಳಿಂದ ವಾಸಿಸುತ್ತಿದ್ದ ಮುಸ್ಲಿಂ ಕುಟುಂಬಗಳನ್ನು ಬೀದಿಗೆ ಹಾಕಿ,ಬುಲ್ಡೋಜರ್ ರಾಜ್ ಕ್ರಮವನ್ನು ಕರ್ನಾಟಕ ಕಾಂಗ್ರೆಸ್​​ ಸರ್ಕಾರ ಅನುಸರಿಸುತ್ತಿದೆ” ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಎಕ್ಸ್​​​ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ದುಃಖಕರ ವಿಚಾರವೆಂದರೆ ಸಂಘ ಪರಿವಾರದ ಅಲ್ಪಸಂಖ್ಯಾತ ವಿರೋಧಿ ರಾಜಕೀಯವನ್ನು ಈಗ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಕೂಡ ಮಾಡುತ್ತಿದೆ. ಭಯ ಮತ್ತು ಕ್ರೂರತೆಯ ಬಲದ ಮೂಲಕ ಆಡಳಿತ ನಡೆಸುವಾಗ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಘನತೆಯು ಮೊದಲ ಬಲಿಪಶುಗಳಾಗುತ್ತವೆ. ಈ ಮೋಸದ ಪ್ರವೃತ್ತಿಯನ್ನು ವಿರೋಧಿಸಲು ಮತ್ತು ಸೋಲಿಸಲು ಎಲ್ಲಾ ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ಶಕ್ತಿಗಳು ಒಟ್ಟಾಗಿ ಒಟ್ಟುಗೂಡಬೇಕು ಎಂದು ಹೇಳಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *