ಪ್ರಯಾಣ ಮಧ್ಯೆ ದಿಢೀರ್ ಎದೆನೋವು: ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಪ್ರಯಾಣ ಮಧ್ಯೆ ದಿಢೀರ್‌ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಯಿತು.

ಕೊಪ್ಪಳದಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಶಿರಾ ದಾಟಿ ಕೋರ ಬಳಿ ಬರುವಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿತು. ಹೀಗಾಗಿ ಕೂಡಲೇ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ದಾಖಲಿಸಲಾಯಿತು.

ಆಸ್ಪತ್ರೆಯಲ್ಲಿ ಇಕೋ ಟೆಸ್ಟ್ ಸೇರಿದಂತೆ ಹೃದಯ ಸಂಬಂಧಿತ ತಪಾಸಣೆ ಮಾಡಲಾಗಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ತುಮಕೂರು ಎಸ್ಪಿ ಅಶೋಕ್, ಡಿವೈಎಸ್ಪಿ ಚಂದ್ರಶೇಖರ್ ದೌಡಾಯಿಸಿದ್ದು, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಅಪಾಯದಿಂದ ಪಾರಾಗಿದ್ದಾರೆ ಎಂದ ವೈದ್ಯರು ತಿಳಿಸಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *