ಆಸ್ಥಾನದ ವಿದೂಷಕರಂತೆ ವರ್ತಿಸಬೇಡಿ, ಸಿದ್ದರಾಮಯ್ಯಗೆ ಎಚ್.‌ ವಿಶ್ವನಾಥ್ ಕಿವಿಮಾತು

ಆಸ್ಥಾನದ ವಿದೂಷಕರಂತೆ ವರ್ತಿಸಬೇಡಿ, ಹೀಗಂತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಧಾನಪರಿಷತ್ ಸದಸ್ಯ ಎಚ್‌ ವಿಶ್ವನಾಥ್ ಕಿವಿಮಾತನ್ನು ಹೇಳಿದ್ದಾರೆ. ಅಷ್ಟಕ್ಕೂ ಸಿದ್ದು ವಿರುದ್ಧ ಕಿಡಿಕಾರಲು ಕಾರಣವೇನು?

ಮೈಸೂರು: ಆಸ್ಥಾನದ ವಿದೂಷಕರಂತೆ ವರ್ತಿಸಬೇಡಿ ಬದಲಾಗಿ ರಾಜಕೀಯ ಮುತ್ಸದ್ಧಿಯಂತೆ ವರ್ತಿಸಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಎಚ್‌. ವಿಶ್ವನಾಥ್ ಕಿವಿಮಾತು ಹೇಳಿದ್ದಾರೆ.

ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕುರಿತಾಗಿ ಸಿದ್ದರಾಮಯ್ಯ ಅವರು ಬಳಸಿರುವ ಭಾಷೆಯನ್ನು ಯಾರೂ ಒಪ್ಪುವುದಿಲ್ಲ. ನಳಿನ್ ಕುಮಾರ್ ಅವರನ್ನು ತೆಗಳುವ ಭರದಲ್ಲಿ ಕಾಡಿನ ಜನರನ್ನು ಹೀಯಾಳಿಸಿದ್ದೀರಿ ಎಂದು ಎಚ್‌. ವಿಶ್ವನಾಥ್ ಟೀಕಿಸಿದ್ದಾರೆ.

ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದವರುಈ ಕಾರಣಕ್ಕಾಗಿ ನಿಮ್ಮ ಮಾತನ್ನು ವಾಪಾಸ್ ಪಡೆಯಬೇಕು. ನೀವು ಆಸ್ಥಾನದ ವಿದೂಷಕರ ರೀತಿ ವರ್ತಿಸದಿರಿ. ನೀವು ಬಳಸಿರುವ ಭಾಷೆಯನ್ನು ಯಾರೂ ಒಪ್ಪುವುದಿಲ್ಲ. ಇದು ಕಾಡಿನ ಜನರಿಗೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಏಕವಚನ, ಬಹುವಚನಕ್ಕೆ ವ್ಯತ್ಯಾಸ ಗೊತ್ತಿಲ್ಲ. ಸುಮ್ಮನೆ ಬೇರೆಯವರಿಗೆ ಸಂಧಿ ಪಾಠ ಮಾಡುತ್ತಾರೆ ಎಂದ ವಿಶ್ವನಾಥ್ ಪ್ರಬುದ್ಧ ಎಂದು ತೋರಿಸಿಕೊಳ್ಳಲು ಹೋಗಿ ಅಪ್ರಬುದ್ಧರಾಗುತ್ತಿದ್ದಾರೆ. ಜನ ನಿಮ್ಮ ತಲೆ ಖಾಲಿಯಾಗಿದೆ, ವಿವೇಚನೆ ಇಲ್ಲ ಅಂದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕೆಂಡಾಮಂಡಲರಾಗಿದ್ದ ಸಿದ್ದರಾಮಯ್ಯ ನಳಿನ್ ಕಾಡು ಮನುಷ್ಯ ಎಂದಿದ್ದರು. ಅಲ್ಲದೆ ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಟ್ವೀಟ್ ಮಾಡಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *