ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಕೊರೊನಾ ಸೋಂಕು ದೃಢ..!

ಹೊಸದಿಲ್ಲಿ: ಕೊರೊನಾ ಸಾಂಕ್ರಾಮಿಕ ರೋಗ ದಿನದಿಂದ ದಿನಕ್ಕೆ ಹರಡುತ್ತಿದ್ದು ಇನ್ನೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಇಲ್ಲಿಯತನಕ ಭಾರತದಲ್ಲಿ ಲಕ್ಷಾಂತರ ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಇದೀಗ ಆ ಸಾಲಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿಸೇರಿದ್ದಾರೆ. ಕೇಂದ್ರ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಖಾತೆಯ ಸಚಿವೆಯಾಗಿರುವ ಸ್ಮೃತಿ ಇರಾನಿ ಅವರಿಗೆ ಬುಧವಾರ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ಈ ಕುರಿತು ಅವರೇ ಟ್ವಿಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಾಮಾನ್ಯವಾಗಿ ಯಾವುದೇ ಘೋಷಣೆಗಳನ್ನು ಮಾಡೋವಾಗ ಪದಗಳಿಗಾಗಿ ತಡಕಾಡೋದು ವಿರಳ. ಆದರೆ ಈಗ ಸರಳವಾಗಿ ಹೇಳುತ್ತಿದ್ದೇನೆ. ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ

ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರುವ ಹಿನ್ನೆಲೆ ವೈದ್ಯರ ಸಲಹೆ ಪಡೆದಿರುವ ಸ್ಮೃತಿ ಇರಾನಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಕಾಣಿಸಿಕೊಂಡಿಲ್ಲ. ದೇಹದಲ್ಲಿ ಕೊರೊನಾ ಪಾಸಿಟಿವ್ ಗುಣಲಕ್ಷಣಗಳು ಅಷ್ಟೇ ಕಾಣಿಸಿಕೊಂಡಿವೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ರಾಜಕಾರಣಿಗಳಲ್ಲಿ ಹೆಚ್ಚಾಗಿ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದ್ದು, ಜನರ ಜೊತೆ ಸಂಪರ್ಕದಲ್ಲಿರುವುದರಿಂದ ಸೋಂಕು ಹರಡುವ ಸಾಧ್ಯತೆ ಇರುತ್ತದೆ. ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ರಾಮ್‌ದಾಸ್‌ ಅಠಾವಳೆ ಅವರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *