ಚಳಿಗಾಲದಲ್ಲಿ ಕೊರೊನಾರ್ಭಟ ಹೆಚ್ಚಾಗುವ ಆತಂಕ: ಎಲ್ಲ ರಾಜ್ಯಗಳಿಂದ ವರದಿ ಕೇಳಿದ ಸುಪ್ರೀಂ..!

ಹೊಸ ದಿಲ್ಲಿ: ಚಳಿಗಾಲ ಇರುವ ಹಿನ್ನೆಲೆಯಲ್ಲಿ ಡಿಸೆಂಬರ್ ವೇಳೆಗೆ ಕೊರೊನಾ ವೈರಸ್ ಸೋಂಕು ಹರಡುವಿಕೆ ತೀವ್ರಗೊಳ್ಳುವ ಆತಂಕ ಎದುರಾಗಿದೆ. ಅದರಲ್ಲೂ ರಾಷ್ಟ್ರ ರಾಜಧಾನಿ ದಿಲ್ಲಿ, ಗುಜರಾತ್, ಮಹಾರಾಷ್ಟ್ರ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಕೋವಿಡ್ ಆರ್ಭಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳಿಂದಲೂ ಸುಪ್ರೀಂ ಕೋರ್ಟ್‌

ವರದಿ ಕೇಳಿದೆ. ಅದರಲ್ಲೂ ಕೊರೊನಾ ತೀವ್ರವಾಗಿರುವ ನಾಲ್ಕೂ ರಾಜ್ಯಗಳ ಮೇಲೆ ಸುಪ್ರೀಂ ಕೋರ್ಟ್‌ ವಿಶೇಷ ನಿಗಾ ವಹಿಸಿದೆ.

ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 91 ಲಕ್ಷದ ಗಡಿ ದಾಟಿದೆ. ಪ್ರತಿ ದಿನವೂ 50 ಸಾವಿರದ ಒಳಗೆ ದೇಶಾದ್ಯಂತ ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗುತ್ತಿದ್ದಾರೆ. 85 ಲಕ್ಷಕ್ಕೂ ಹೆಚ್ಚು ರೋಗಿಗಳು ದೇಶಾದ್ಯಂತ ಈಗಾಗಲೇ ಚೇತರಿಕೆ ಕಂಡಿದ್ದಾರೆ. 1 ಲಕ್ಷದ 33 ಸಾವಿರ ಮಂದಿ ಈಗಾಗಲೇ ದೇಶದಲ್ಲಿ ಕೊರೊನಾಗೆ ಬಲಿಯಾಗಿದ್ಧಾರೆ. ಕೇಂದ್ರ ಆರೋಗ್ಯ ಇಲಾಖೆ ಅಂಕ ಅಂಶದ ಪ್ರಕಾರ ಭಾನುವಾರ ಒಂದೇ ದಿನ 511 ಮಂದಿ ಜೀವಬಿಟ್ಟಿದ್ದಾರೆ.


ದಿಲ್ಲಿ ಹಾಗೂ ಮಹಾರಾಷ್ಟ್ರ ಬಳಿಕ ಗುಜರಾತ್‌ನಲ್ಲೂ ಪರಿಸ್ಥಿತಿ ಹದಗೆಡುತ್ತಿದೆ. ಚಳಿಗಾಲವಾದ್ದರಿಂದ ದೇಶದ ಎಲ್ಲಾ ರಾಜ್ಯ ಸರ್ಕಾರಗಳು ಹಾಗೂ ಕೇಂದ್ರ ಸರ್ಕಾರ ಕೂಡಾ ಮುನ್ನೆಚ್ಚರಿಕೆ ವಹಿಸಬೇಕೆಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಆರ್ ಎಸ್ ರೆಡ್ಡಿ ಹಾಗೂ ಎಂ. ಆರ್. ಶಾ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.

ಸುಪ್ರೀಂ ಕೋರ್ಟ್‌ಗೆ ಸಿಕ್ಕಿರುವ ಮಾಹಿತಿಗಳ ಪ್ರಕಾರ ದೇಶದಲ್ಲಿ ಡಿಸೆಂಬರ್ ವೇಳೆಗೆ ಕೊರೊನಾ ವೈರಸ್ ಸ್ಥಿತಿಗತಿ ಗಂಭೀರ ಸ್ವರೂಪ ಪಡೆಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳು ಇನ್ನೆರಡು ದಿನಗಳ ಒಳಗೆ ವರದಿ ನೀಡಬೇಕೆಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಕರ್ನಾಟಕದ ಮಟ್ಟಿಗೆ ಹೇಳೋದಾದ್ರೆ, ರಾಜ್ಯದಲ್ಲಿ ಈವರೆಗೆ 8 ಲಕ್ಷದ 71 ಸಾವಿರಕ್ಕೂ ಹೆಚ್ಚು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 8 ಲಕ್ಷದ 35 ಸಾವಿರ ಮಂದಿ ಚೇತರಿಕೆ ಕಂಡಿದ್ದಾರೆ. 11,641 ಮಂದಿ ಈವರೆಗೆ ಜೀವಬಿಟ್ಟಿದ್ದಾರೆ. ರಾಜ್ಯದಲ್ಲಿ ಪ್ರತಿ ದಿನವೂ 1 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗುತ್ತಲೇ ಇವೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *