ಖ್ಯಾತ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕಾರು ಅಪಘಾತ

ಚೆನ್ನೈ: ಖ್ಯಾತ ನಟಿ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರ ಕಾರು ಮೆಲ್ಮರುವಾತೂರ್ ಬಳಿ ಅಪಘಾತಕ್ಕೀಡಾಗಿದೆ.
ಟ್ಯಾಂಕರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಖುಷ್ಬೂ ಸುಂದರ್ (Kushbu Sundar) ಅವರಿಗೆ ಯಾವುದೇ ಅಪಾಯ ಆಗಿಲ್ಲ ಎಂದು ತಿಳಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾಗಿದ್ದ ಖುಷ್ಬೂ ಸುಂದರ್ ಅವರು ಅಕ್ಟೋಬರ್‌ನಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡರು.
ಕಾಂಗ್ರೆಸ್ ಪಕ್ಷದಲ್ಲಿ ಮೇಲಿನ ಹುದ್ದೆಗಳಲ್ಲಿ ಇರುವವರು ತಳಮಟ್ಟದ ವಾಸ್ತವತೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ. ಪಕ್ಷದಲ್ಲಿ ನಿಷ್ಠಾವಂತರಾಗಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಸೂಕ್ತವಾದ ಮನ್ನಣೆ ಸಿಗುತ್ತಿಲ್ಲ. ಕಾಂಗ್ರೆಸ್ನಲ್ಲಿ ನಾಯಕತ್ವದ ಕೊರತೆಯಿದೆ ಎಂದು ಉಲ್ಲೇಖಿಸಿರುವುದಷ್ಟೇ ಅಲ್ಲದೆ ಈ ಪಕ್ಷದೊಂದಿಗಿನ ಇಷ್ಟು ದಿನಗಳ ನನ್ನ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ಅವರು ಪಕ್ಷ ತೊರೆಯುವ ವೇಳೆ ತಿಳಿಸಿದ್ದರು.