Bangalore Rain: ಬೆಂಗಳೂರಿನಲ್ಲಿಂದು ಮೋಡ ಕವಿದ ವಾತಾವರಣ, ಸಂಜೆ ಮಳೆ ಸಾಧ್ಯತೆ
Karnataka Weather: ಕೇರಳ ಮತ್ತು ತಮಿಳುನಾಡಿನ ಗಡಿಭಾಗದಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ 5 ಗಂಟೆಯ ನಂತರ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಬುರೇವಿ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನಲ್ಲಿ 2-3 ದಿನಗಳಿಂದ ಮಳೆಯಾಗಿತ್ತು. ಇಂದು ಕೂಡ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ತುಂತುರು ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ 2-3 ದಿನಗಳಿಂದ ಮಳೆಯಾಗಿದೆ. ಕರ್ನಾಟಕದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಇಂದು ಇಡೀ ದಿನ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ 5 ಗಂಟೆಯ ನಂತರ ತುಂತುರು ಮಳೆಯಾಗುವ ಸಾಧ್ಯತೆಯಿದೆ. ನಂತರ ರಾತ್ರಿ 9 ಗಂಟೆಯ ನಂತರ ಜೋರಾಗಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಕೂಡ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಶಿವಮೊಗ್ಗ, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೂಡ ಬುರೇವಿ ಚಂಡಮಾರುತದ ಪರಿಣಾಮದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡಿನ ಕನ್ಯಾಕುಮಾರಿ, ತಿರುನೆಲ್ವೇಲಿ, ತೂತುಕುಡಿ, ರಾಮನಾಥಪುರಂ, ಸಿವಗಂಗೈ ಮತ್ತು ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಭಾಗದಲ್ಲಿ ನಿನ್ನೆಯವರೆಗೆ ಭಾರೀ ಮಳೆಯಾಗಿತ್ತು. ಇದರಿಂದ ಕೇರಳದಲ್ಲೂ ಅನೇಕ ಕಡೆ ಮನೆಗಳು ಮುಳುಗಡೆಯಾಗಿವೆ. ಹೀಗಾಗಿ, ಇಂದು ಕೇರಳದ 4 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೇರಳದ ಪಥನಾಂತಿಟ್ಟ, ಎರ್ನಾಕುಲಂ, ಇಡುಕ್ಕಿ, ಮಲಪ್ಪುರಂ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬುರೇವಿ ಚಂಡಮಾರುತದ ಹಾವಳಿಯಿಂದ ತಮಿಳುನಾಡಿನ ದಕ್ಷಿಣ ಹಾಗೂ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಡ್ಡಲೂರ್ ಜಿಲ್ಲೆಯಲ್ಲಿ 66,000ಕ್ಕೂ ಅಧಿಕ ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. 5,000 ಜನರನ್ನು ರಾಮನಾಥಪುರಕ್ಕೆ ಸ್ಥಳಾಂತರಿಸಲಾಗಿದೆ. ತಮಿಳುನಾಡಿನಲ್ಲಿ ಅನೇಕ ಹಸುಗಳು, ಸಾಕುಪ್ರಾಣಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ.