ಶಿವಮೊಗ್ಗ: 689 ಕೋಟಿ ರೂ. ವೆಚ್ಚದ ಎನ್‍ ಹೆಚ್ ಯೋಜನೆಗಳಿಗೆ ಚಾಲನೆ ನೀಡಿದ ಕೆಂದ್ರ ಸಚಿವ ನಿತಿನ್ ಗಡ್ಕರಿ

ಶಿವಮೊಗ್ಗ(ಡಿ.20): ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ದಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದೆ.  ಮುಂದಿನ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ. ರಾಜ್ಯದಲ್ಲಿ ಇದುವರೆಗೆ ಇದ್ದ 22 ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44 ಕ್ಕೆ ಹೆಚ್ಚಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಶನಿವಾರ ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಸಮಾರಂಭ ಜರುಗಿತು. ಈ ವೇಳೆ  ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಈ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ,  ಜಿಲ್ಲೆಯ ಮೂಲಸೌಕರ್ಯ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.  ರಾಜ್ಯದಲ್ಲಿ ಇದುವರೆಗೆ ಇದ್ದ 22 ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44ಕ್ಕೆ ಹೆಚ್ಚಿಸಲಾಗಿದೆ. 423ಕೋಟಿ ರೂ. ವೆಚ್ಚದಲ್ಲಿ ಕಳಸವಳ್ಳಿ-ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಭರದಿಂದ ನಡೆಯುತ್ತಿದ್ದು, ಒಂದು ವರ್ಷದ ಒಳಗಾಗಿ ಪೂರ್ಣಗೊಳ್ಳಲಿದೆ. 516 ಕೋಟಿ ರೂ.ವೆಚ್ಚದಲ್ಲಿ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ಅಭಿವೃದ್ದಿಯಿಂದ ಬೆಂಗಳೂರು ಸಂಪರ್ಕ ಸುಲಭವಾಗಲಿದೆ ಎಂದು ತಿಳಿಸಿದರು

ಶಿವಮೊಗ್ಗ ನಗರದ ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ವಿದ್ಯಾನಗರದ ಬಳಿ ವಿನೂತನವಾದ ವೃತ್ತಾಕಾರದ ರೈಲ್ವೇ ಮೇಲ್ಸೇತುವೆ ನಿರ್ಮಾಣ ಕಾರ್ಯ 44 ಕೋಟಿ ರೂ. ವೆಚ್ಚದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ನಿಟ್ಟೂರು ಮತ್ತು ಹೊಸನಗರ ಭಾಗದಲ್ಲಿ ಶಿಥಿಲಗೊಂಡಿರುವ 7ಸೇತುವೆಗಳ ಪುನರ್ ನಿರ್ಮಾಣಕ್ಕಾಗಿ 19ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 96ಕೋಟಿ ರೂ. ವೆಚ್ಚದಲ್ಲಿ ಸೊಲ್ಲಾಪುರ-ಮಂಗಳೂರು ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ತೀರ್ಥಹಳ್ಳಿ-ಉಡುಪಿ ರಸ್ತೆಯಲ್ಲಿ 8.20ಕೋಟಿ ರೂ ವೆಚ್ಚದಲ್ಲಿ 3 ಕಿರು ಸೇತುವೆ ನಿರ್ಮಾಣ, ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 7 ಕಿರು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಿಆರ್​​ಎಫ್ ಯೋಜನೆಯಡಿ ಇನ್ನೂ 400ಕೋಟಿ ರೂ. ಯೋಜನೆಗಳ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಶಿವಮೊಗ್ಗ ನಗರದಲ್ಲಿ 3200 ಮೀಟರ್ ಉದ್ದದ ರನ್‍ವೇ ಸೌಲಭ್ಯ ಹೊಂದಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ತುಂಗಾ ನದಿಯಿಂದ ಜಿಲ್ಲೆಯ 1500 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

 

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ರಾಜ್ಯದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸಿದೆ. 5612 ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್‍ವೈ ಯೋಜನೆಯಡಿ 3,660ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *