ಮಹಾರಾಷ್ಟ್ರದಲ್ಲಿ ಮುಂದಿನ 6 ತಿಂಗಳು ಮಾಸ್ಕ್ ಕಡ್ಡಾಯ, ಲಾಕ್‌ಡೌನ್ ತಳ್ಳಿಹಾಕಿದ ಠಾಕ್ರೆ ಸರ್ಕಾರ

ರಾಜ್ಯದಲ್ಲಿ ಮುಂದಿನ ಆರು ತಿಂಗಳು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದ್ದಾರೆ.

ಮುಂಬೈ: ರಾಜ್ಯದಲ್ಲಿ ಮುಂದಿನ ಆರು ತಿಂಗಳು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಭಾನುವಾರ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ತಜ್ಞರು ಕೊರೋನಾ ವೈರಸ್ ಹರಡುವುದನ್ನು ತಡೆಯಲು ರಾತ್ರಿ ಕರ್ಫ್ಯೂ ಅಥವಾ ಇನ್ನೊಂದು ಲಾಕ್ ಡೌನ್ ವಿಧಿಸುವ ಸಲಹೆ ನೀಡಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಮತ್ತೆ ಲಾಕ್ ಡೌನ್ ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ವೈರಸ್ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆದರೆ ಸಂಪೂರ್ಣವಾಗಿ ಅಲ್ಲ. ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ. ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಇನ್ನೂ ಆರು ತಿಂಗಳು ಮಾಸ್ಕ್ ಧರಿಸುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಠಾಕ್ರೆ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಶನಿವಾರ 3,940 ಹೊಸ ಕೋವಿಡ್ -19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಸೋಂಕಿತರ 18,92,707 ಕ್ಕೆ ತಲುಪಿದೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *