ಭಾರತಕ್ಕೂ ಲಗ್ಗೆ ಇಟ್ಟ ಹೊಸ ಮಾದರಿ ಕೊರೋನಾ: ಬ್ರಿಟನ್ ನಿಂದ ಚೆನ್ನೈಗೆ ಬಂದ ವ್ಯಕ್ತಿಯಲ್ಲಿ ಸೋಂಕು ಪತ್ತೆ, ಹೆಚ್ಚಿದ ಆತಂಕ

ನವದೆಹಲಿ: ಬ್ರಿಟನ್‌ನಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ಸೋಂಕಿನ ಹೊಸ ಮಾದರಿ ಭಾರತಕ್ಕೂ ಲಗ್ಗೆ ಇಟ್ಟಿದೆ. ಇಂಗ್ಲೆಂಡ್’ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಇಂದು ಬೆಳಿಗ್ಗೆ ಬ್ರಿಟನ್ ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಒಟ್ಟು 15 ಮಂದಿ ಆಗಮಿಸಿದ್ದು, ಅವರಲ್ಲಿ ಒಬ್ಬರಿಗೆ ಹೊಸ ಮಾದರಿಯ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ನಡುವೆ ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ಅವರು ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಯಾಣಿಕರ ಮಾದರಿಗಳನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಪುಣೆಗೆ ಕಳುಹಿಸಲಾಗಿದ್ದು, ವ್ಯಕ್ತಿಗೆ ಹೊಸ ಮಾದರಿಯ ಕೊರೋನಾ ಸೋಂಕು ತಗುಲಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕಳೆದ 10 ದಿನಗಳಲ್ಲಿ ಬ್ರಿಟನ್ ನಿಂದ ರಾಜ್ಯಕ್ಕೆ ಆಗಮಿಸಿದ ಎಲ್ಲಾ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯವನ್ನು ಈಗಾಗಲೇ ಆರೋಗ್ಯ ಇಲಾಖೆ ಆರಂಭಿಸಿದೆ ಎಂದು ತಿಳಿಸಿದ್ದಾರೆ.

ಸೋಂಕಿತ ಪ್ರಯಾಣಿಕರನ್ನು ಗಿಂಡಿಯ ಕಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿರುವ ವಿಶೇಷ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ಈ ನಡುವೆ ಆಸ್ಪತ್ರೆಯ ವೈದ್ಯರು ಹೇಳಿಕೆ ನೀಡಿ, ಸೋಂಕಿತ ವ್ಯಕ್ತಿ ಲಕ್ಷಣರಹಿತವಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ರೂಪಾಂತರ ಕೊರೋನಾ ಬಗ್ಗೆ ಜನರು ಆತಂಕಕ್ಕೊಳಗಾಗಬಾರದು. ಸೋಂಕು ಹರಡದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಆರ್‌ಟಿ ಪಿಸಿಆರ್ ಪರೀಕ್ಷೆಗಳಿಗೆ ವಿಸ್ತಾರವಾದ ವ್ಯವಸ್ಥೆ ಮಾಡಲಾಗಿದೆ. ಹೊಸ ಮಾದರಿ ಕೊರೋನಾ ಪತ್ತೆಯಾಗುತ್ತಿದ್ದಂತೆಯೇ ಯುರೋಪಿಯನ್ ರಾಷ್ಟ್ರಗಳ ಎಲ್ಲಾ ವಿಮಾನಗಳನ್ನು ಕಳೆದ ರಾತ್ರಿಯಿಂದಲೇ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *