ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ನಿಧನಕ್ಕೆ ಎಚ್.ಡಿ.ದೇವೇಗೌಡ, ಸಿಎಂ ಬಿಎಸ್ವೈ ಸೇರಿ ಹಲವು ಗಣ್ಯರ ಸಂತಾಪ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಸಹೋದರರಂತಿದ್ದ ಧರ್ಮೆಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತ ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಭಗವಂತ ಕರುಣಿಸಲಿ ಎಂದಿದ್ದಾರೆ.
ಬೆಂಗಳೂರು(ಡಿ.29): ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ನಿನ್ನೆ ತಡರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆಘಾತಕಾರಿ ಸುದ್ದಿಯಾಗಿದ್ದು, ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಉಪಸಭಾಪತಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ವಿಷಾದ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡರ ಆತ್ಮಹತ್ಯೆ ಸುದ್ದಿ ಆಘಾತ ತಂದಿದೆ. ಸಜ್ಜನ, ಸನ್ನಡತೆಯ ಉಪಸಭಾಪತಿಗಳನ್ನು ಕಳೆದುಕೊಂಡದ್ದು ನಮ್ಮ ರಾಜ್ಯಕ್ಕೆ ನಷ್ಟ. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಇನ್ನು, ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದಾರೆ. ವಿಧಾನ ಪರಿಷತ್ ಉಪ ಸಭಾಪತಿ ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಸ್. ಎಲ್ . ಧರ್ಮೇಗೌಡ ಅವರ ಅಕಾಲಿಕ ನಿಧನ ಅತ್ಯಂತ ದುರದೃಷ್ಟಕರ ಹಾಗೂ ತೀವ್ರ ಆಘಾತ ತಂದಿದೆ. ವಿಧಾನ ಪರಿಷತ್ ಸದಸ್ಯರಾಗಿ, ಉಪ ಸಭಾಪತಿಯಾಗಿ ಅವರ ಕಾರ್ಯ ವೈಖರಿ ಅತ್ಯುತ್ತಮವಾಗಿತ್ತು ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ಕರುಣಿಸಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಈ ಆಘಾತವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಉಪಸಭಾಪತಿ ಎಸ್.ಎಲ್.ಧರ್ಮೇಗೌಡ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, ಸಹೋದರರಂತಿದ್ದ ಧರ್ಮೆಗೌಡರ ಆತ್ಮಹತ್ಯೆ ಸುದ್ದಿ ತೀವ್ರ ಆಘಾತ ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಭಗವಂತ ಕರುಣಿಸಲಿ ಎಂದಿದ್ದಾರೆ.
ಇತ್ತೀಚೆಗೆ ವಿಧಾನಪರಿಷತ್‌ನಲ್ಲಿ ನಡೆದ ಎಳೆದಾಟ ತಳ್ಳಾಟ ಪ್ರಕರಣದಿಂದ ಎಸ್.ಎಲ್. ಧರ್ಮೇಗೌಡ ಅವರು ಸಾಕಷ್ಟು ಮನನೊಂದಿದ್ದರು. ಈ ಘಟನೆಯಿಂದ ಉಪಸಭಾಪತಿ ಮಾನಸಿಕವಾಗಿ ಕುಗ್ಗಿದ್ದರು ಎನ್ನಲಾಗಿದೆ. ವಿಧಾನಪರಿಷತ್‌ನಲ್ಲಿ ಎಳೆದಾಟ ಪ್ರಕರಣದ ನಡೆದು ಕೆಲವೇ ದಿನಗಳಲ್ಲಿ ಎಸ್.ಎಲ್.ಧರ್ಮೇಗೌಡ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.