ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಬಿ ಎಸ್ ಯಡಿಯೂರಪ್ಪ ವಿಶ್ವಾಸ
ಆಡಳಿತಾರೂಢ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲ್ಲಿವ ಸಾಧ್ಯತೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನೆಲಮಂಗಲ ಜ್ಯೂನಿಯರ್ ಕಾಲೇಜ್ ನಲ್ಲಿ ಬ್ಯಾಲೆಟ್ ಬಾಕ್ಸ್ ಇಡಲಾಗಿದ್ದು ಪೊಲೀಸ್ ಸಿಬ್ಬಂದಿ ಕಾವಲು
ಬೆಂಗಳೂರು: ಆಡಳಿತಾರೂಢ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆಲ್ಲಿವ ಸಾಧ್ಯತೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಶೇಕಡಾ 85ರಿಂದ 90ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದು ಬರಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ಕಾಂಗ್ರೆಸ್ ನಾಯಕರು ಈ ಚುನಾವಣೆಯನ್ನು ಅಷ್ಟು ಆಸಕ್ತಿಕರವಾಗಿ ತೆಗೆದುಕೊಂಡಿಲ್ಲ. ಆದರೆ ನಮ್ಮ ಕಾರ್ಯಕರ್ತರು, ಶಾಸಕರು ಮತ್ತು ಸಚಿವರುಗಳು ತಮ್ಮ ಕ್ಷೇತ್ರಗಳಲ್ಲಿ ಸುತ್ತಾಡಿ ಸಾಕಷ್ಟು ಕೆಲಸ ಮಾಡಿ ತಳಮಟ್ಟದಲ್ಲಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತ್ ಗಳನ್ನು ವಿಸ್ತರಿಸುವುದು ಮತ್ತು ಬಲಪಡಿಸುವುದು ಪ್ರಧಾನಿ ಮೋದಿಯವರ ಕನಸಾಗಿದೆ. ಗ್ರಾಮ ಪಂಚಾಯತ್ ಗಳನ್ನು ಬಲಪಡಿಸಲು ಸರ್ಕಾರ ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದರು.
ಗ್ರಾಮ ಪಂಚಾಯತ್ ನ ಮೊದಲ ಹಂತದ ಮತದಾನದಲ್ಲಿ 3,019 ಪಂಚಾಯತ್ ಗಳಿಗೆ ಕಳೆದ 22 ರಂದು ಮತದಾನ ನಡೆದಿತ್ತು, ಮೊನ್ನೆ 27ರಂದು 2,709 ಪಂಚಾಯತ್ ಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆದಿತ್ತು, ನಾಳೆ ಮತ ಎಣಿಕೆ ನಡೆಯಲಿದೆ.