ಭಾರತದಲ್ಲಿ ರೂಪಾಂತರಿ ಕೋವಿಡ್ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆ: ಆರೋಗ್ಯ ಇಲಾಖೆ
ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಭಾರಿ ಸದ್ದು ಮಾಡುತ್ತಿರುವ ರೂಪಾಂತರಿ ಕೋವಿಡ್ ಸೋಂಕಿಗೆ ತುತ್ತಾದ ಭಾರತೀಯರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನವದೆಹಲಿ: ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಭಾರಿ ಸದ್ದು ಮಾಡುತ್ತಿರುವ ರೂಪಾಂತರಿ ಕೋವಿಡ್ ಸೋಂಕಿಗೆ ತುತ್ತಾದ ಭಾರತೀಯರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತಂತೆ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದ್ದು, ಶುಕ್ರವಾರ ಮತ್ತೆ 4 ಹೊಸ ರೂಪಾಂತರಿ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ದೇಶದಲ್ಲಿ ಬ್ರಿಟನ್ ಸೋಂಕಿಗೆ ತುತ್ತಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಸೋಂಕಿತರೆಲ್ಲರೂ ದೇಶದ ವಿವಿಧ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೊಠಡಿಗಳಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
29 ಸೋಂಕಿತರ ಪೈಕಿ ದೆಹಲಿಯ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ಯಲ್ಲಿ 8 ಜನರ ಮಾದರಿಗಳಲ್ಲಿ ರೂಪಾಂತರಿತ ಬ್ರಿಟನ್ ಸೋಂಕು ಪತ್ತೆಯಾಗಿದೆ, ಇಬ್ಬರು ದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಜೀನೋಮಿಕ್ಸ್ ಅಂಡ್ ಇಂಟಿಗ್ರೇಟಿವ್ ಬಯಾಲಜಿ (ಐಜಿಐಬಿ), ರಾಷ್ಟ್ರೀಯ ಸಂಸ್ಥೆಯಲ್ಲಿ ಒಬ್ಬರು ಬಯೋಮೆಡಿಕಲ್ ಜೀನೋಮಿಕ್ಸ್ (ಎನ್‌ಐಬಿಎಂಜಿ), ಕಲ್ಯಾಣಿ (ಕೋಲ್ಕತ್ತಾದ ಹತ್ತಿರ), ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ ಐದು, ಹೈದರಾಬಾದ್‌ನ ಸೆಂಟರ್ ಫಾರ್ ಸೆಲ್ಯುಲಾರ್ ಮತ್ತು ಮಾಲಿಕ್ಯೂಲರ್ ಬಯಾಲಜಿ (ಸಿಸಿಎಂಬಿ) ಯಲ್ಲಿ ಮೂರು ಮತ್ತು ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಅನುಕ್ರಮವಾಗಿದೆ ಆಸ್ಪತ್ರೆ (ನಿಮ್ಹಾನ್ಸ್) ಬೆಂಗಳೂರಿನ 10 ಮಾದರಿಗಳಲ್ಲಿ ಬ್ರಿಟನ್ ದೃಢವಾಗಿದೆ.
ಪ್ರಸ್ತುತ ಸೋಂಕಿತರೆಲ್ಲರೂ ಸಂಪರ್ಕ ಪತ್ತೆ ಮಾಡಲಾಗುತ್ತಿದ್ದು, ಸಹ ಪ್ರಯಾಣಿಕರು, ಕುಟುಂಬ ಸಂಪರ್ಕಗಳು ಮತ್ತು ಇತರೆ ಸಂಪರ್ಕಗಳ ಪತ್ತೆ ಕಾರ್ಯ ಮಾಡಲಾಗುತ್ತಿದೆ.
ಇನ್ನು ಹೊಸ ರೂಪಾಂತರಿ ಕೊರೋನಾ ವೈರಸ್ ಸೋಂಕಿತ ರಾಷ್ಟ್ರಗಳ ಪಟ್ಟಿ ಕೂಡ ಸೋಂಕಿತರ ಪಟ್ಟಿಯಂತೆಯೇ ಬೆಳೆಯುತ್ತಾ ಸಾಗಿದ್ದು, ಈ ವರೆಗೂ ಡೆನ್ಮಾರ್ಕ್, ನೆದರ್ಲ್ಯಾಂಡ್ಸ್, ಆಸ್ಟ್ರೇಲಿಯಾ, ಇಟಲಿ, ಸ್ವೀಡನ್, ಫ್ರಾನ್ಸ್, ಸ್ಪೇನ್, ಸ್ವಿಟ್ಜರ್ಲೆಂಡ್, ಜರ್ಮನಿ, ಕೆನಡಾ, ಜಪಾನ್, ಲೆಬನಾನ್ ಮತ್ತು ಸಿಂಗಾಪುರ, ದೇಶಗಳಲ್ಲೂ ಹೊಸ ಮಾದರಿ ಸೋಂಕು ಪತ್ತೆಯಾಗಿದೆ.