ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ…! ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯಾ ನಾಯಕ್ ಸಾವು..!
ಕೇಂದ್ರ ಸಚಿವ ಶ್ರೀಪಾದ್ ನಾಯಕ್ರ ಕಾರು ಪಲ್ಟಿಯಿಂದಾಗಿ ಸಚಿವ ಶ್ರೀಪಾದ್ ನಾಯಕ್ ಪತ್ನಿ ವಿಜಯಾ ನಾಯಕ್ ಸಾವನ್ನಪ್ಪಿದ್ದಾರೆ. ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ದೀಪಕ್ ರಾಮದಾದ ಕೂಡಾ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. ಕೇಂದ್ರ ಸಚಿವ ಶ್ರೀಪಾದ ನಾಯಕ್ ಪತ್ನಿ ನಿಧನಕ್ಕೆ ಸಿಎಂ ಸಂತಾಪ ಸೂಚಿಸಿದ್ದಾರೆ.