ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ; ಸಿದ್ದರಾಮಯ್ಯ
ಹುಬ್ಬಳ್ಳಿ:ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ ಮತ್ತು ಮಾಡುವುದೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗೆಹರಿಸಲು ಬಿಜೆಪಿ ಎಂದಿಗೂ ಪ್ರಯತ್ನ ಮಾಡಿಲ್ಲ. ಪ್ರಮುಖವಾಗಿ ಮಹದಾಯಿ ಸಮಸ್ಯೆ ಬಗೆಹರಿಸಿಲ್ಲ, ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿಲ್ಲ, ಕಲ್ಯಾಣ ಕರ್ನಾಟಕ ಭಾಗಕ್ಕೆ ಅನುದಾನ ನೀಡಿಲ್ಲ, ಎಲ್ಲಕ್ಕಿಂತ ಮುಖ್ಯವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶವನ್ನೇ ಕರೆಯುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.