ಪದವಿ-ಸ್ನಾತಕೋತ್ತರ ಕ್ಲಾಸ್ ಶುರು…! ಇಂದಿನಿಂದ ಡಿಗ್ರಿ, PG ತರಗತಿಗಳಿಗೆ ಆಫ್‌ಲೈನ್ ಕ್ಲಾಸ್ ಶುರು…! ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಸಿಎಂ ಅಶ್ವಥ್ ನಾರಾಯಣ್
ಇಂದಿನಿಂದ ಡ್ರಿಗಿ, ಪಿಜಿ ತರಗತಿಗಳಿಗೆ ಆಫ್‌ಲೈನ್ ಕ್ಲಾಸ್ ಆರಂಭವಾಗಲಿವೆ. ಆಫ್‌ಲೈನ್ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ತರಬೇಕು ಎಂದು ಸೂಚಿಸಲಾಗಿದೆ. ಅನುಮತಿ ಪತ್ರ ಇಲ್ಲದಿದ್ರೆ ತರಗತಿಗೆ ಪ್ರವೇಶವಿಲ್ಲ ಎಂದು ಆರೋಗ್ಯ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ಇನ್ನು ಇಂದಿನಿಂದ ಎಲ್ಲಾ ಕಾಲೇಜುಗಳು ಪುನರಾರಂಭ ಆಗುತ್ತಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ನಡೆಸಿದೆ. ವಿದ್ಯಾರ್ಥಿ ಮಿತ್ರರು, ಸಿಬ್ಬಂದಿಗಳು ಹಾಗೂ ಪೋಷಕರು ಯಾವುದೇ ರೀತಿಯ ಅತಂಕಗಳಿಲ್ಲದೆ ಮಾರ್ಗಸೂಚಿಗಳ ಪಾಲನೆಯೊಂದಿಗೆ ನಮ್ಮೊಂದಿಗೆ ಸಹಕರಿಸಬೇಕೆಂಬುದು ನನ್ನ ಕೋರಿಕೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಹೊಸ SOP ನಲ್ಲಿ ಏನಿದೆ..?
- ಆಫ್‌ಲೈನ್ ಕ್ಲಾಸ್ಗೆ ಪೋಷಕರಿಂದ ಅನುಮತಿ ಪತ್ರ ಕಡ್ಡಾಯ
- ಈ ಪತ್ರ ತರದಿದ್ದರೆ ನೇರ ತರಗತಿಗಳಿಗೆ ಪ್ರವೇಶ ಇರಲ್ಲ
- ಆರೋಗ್ಯ ಇಲಾಖೆಯ ನಿಯಮಗಳನ್ನು ಮೀರುವಂತಿಲ್ಲ
- ದೈಹಿಕ ಅಂತರ ಕಡ್ಡಾಯ
- ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧ ಮಾಡಿಕೊಳ್ಳಬೇಕು
- ಬೋಧನಾ, ಪ್ರಾಕ್ಟಿಕಲ್ ತರಗತಿಗಳನ್ನು ಅಗತ್ಯಬಿದ್ದರೆ ಪಾಳಿ ಆಧಾರದಲ್ಲಿ ಮಾಡಬಹುದು
- ನೇರ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ
- ಕಾಲೇಜಿನ ಕಟ್ಟಡ, ಗ್ರಂಥಾಲಯ, ಶೌಚಾಲಯ, ಕೊಠಡಿ, ಪೀಠೋಪಕರಣ ಸ್ಯಾನಿಟೈಸ್ ಮಾಡ್ಬೇಕು
- ಕಾಲೇಜಿನ, ದ್ವಾರದಲ್ಲಿಯೇ ಥರ್ಮಲ್ ಸ್ಕೀನಿಂಗ್ ಹಾಗೂ ಸ್ಯಾನಿಟೈಸ್ ವ್ಯವಸ್ಥೆ ಕಡ್ಡಾಯ
- ಕೋವಿಡ್ ಲಕ್ಷಣಗಳು ಇರುವವರು ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕು
- ವಿದ್ಯಾರ್ಥಿಗಳ ಹಾಜರಾತಿ ಪ್ರತಿ ಕೊಠಡಿಗೆ ಶೇ.೫೦ ಮೀರುವಂತಿಲ್ಲ
- ಹಾಜರಾತಿ ಹೆಚ್ಚಿದರೆ ಹೆಚ್ಚುವರಿ ಕೊಠಡಿ ವ್ಯವಸ್ಥೆ ಮಾಡಿಕೊಳ್ಳಬೇಕು
- ನೇರ ತರಗತಿಗೆ ಹಾಜರಾಗುವ ವಿದ್ಯಾರ್ಥಿ ಕಡ್ಡಾಯವಾಗಿ ಮನೆಯಿಂದಲೇ ಊಟ ತರಬೇಕು
- ಕುಡಿಯುವ ನೀರು ಮನೆಯಿಂದ ತರಬೇಕು
- ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ.
- NSS ಹಾಗೂ NCC ಚಟುವಟಿಕೆಗಳನ್ನು ಕೋವಿಡ್ ಮಾರ್ಗಸೂಚಿಯಂತೆ ಆರಂಭ