ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ವೀಡಿಯೋ ಸಂವಾದ ನಡೆದ ಬಳಿಕ ಮಾತನಾಡಿದ ಸಚಿವರು, ಶೇ.62 ರಷ್ಟು ಮಂದಿ ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡಿದ್ದು,ಬಹಳ ಆಶಾದಾಯಕವಾಗಿದೆ ಎಂದರು.
ಮೊದಲ ದಿನ 21,658 ಮಂದಿಗೆ ಲಸಿಕೆ ನೀಡಬೇಕೆಂದು ನಿಗದಿಯಾಗಿತ್ತು.ಈ ಪೈಕಿ 13,408 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ.ಯಾರಿಗೂ ಗಂಭೀರ ಸಮಸ್ಯೆ, ಅಡ್ಡ ಪರಿಣಾಮ ಕಂಡುಬಂದಿಲ್ಲ. ಚುಚ್ಚುಮದ್ದು ನೀಡಿದಾಗ ಕೆಲವರಿಗೆ ಊತ ಬಂದಿರಬಹುದು.ಆದರೆ ಅದು ಕೇವಲ ಅರ್ಧಗಂಟೆಯಲ್ಲಿ ಕಡಿಮೆಯಾಗಿ ಮನೆಗೆ ತೆರಳಿದ್ದಾರೆ ಎಂದು ತಿಳಿಸಿದರು.