ನಾಳೆಯಿಂದ ರಾಜ್ಯಾದ್ಯಂತ ಗೋಹತ್ಯೆ ನಿಷೇಧ ಕಾಯ್ದೆ ಜಾರಿ…!

ನಾಳೆಯಿಂದ ರಾಜ್ಯಾದ್ಯಂತ ಗೋಹತ್ಯೆ ನಿಷೇಧ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಾನುವಾರು ಪ್ರತಿಬಂಧಕ ಕಾಯಿದೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನ ಹೊರಡಿಸಿದೆ. ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಸಿದ್ದಾರೆ. ಅಲ್ದೆ ಜಾನುವಾರು ಸಾಗಾಣಿಕೆ ಸಂಬಂಧ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಯಾವುದೇ ಕಾರಣಕ್ಕೂ ಗೊಂದಲಕ್ಕೀಡಾಗಬಾರದು ಎಂದು ಪ್ರಕಟಣೆ ಮೂಲಕ ಸಚಿವರು ರೈತರಲ್ಲಿ ಮನವಿ ಮಾಡಿದ್ದಾರೆ.


ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು ಎಂದು ಸಚಿವರು ತಿಳಿಸಿದ್ದಾರೆ. ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

ಇನ್ನು ರೈತರು ಕೃಷಿ ಉದ್ದೇಶಕ್ಕಾಗಿ ಸ್ಥಳೀಯವಾಗಿ 15 ಕಿಲೋ ಮೀಟರ್ ದೂರದವರೆಗೆ ಪರವಾನಗಿ ಇಲ್ಲದೆ ಎರಡು ಹಸು ಮತ್ತು ಎರಡು ಕರುಗಳನ್ನು ಮಾತ್ರ ಕೊಂಡೊಯ್ಯಬಹುದು. ರಾತ್ರಿ ವೇಳೆ ಗೋವುಗಳ ಸಾಗಣೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಕೃಷಿ ಅಥವಾ ಪಶುಸಂಗೋಪನೆಯ ಉದ್ದೇಶಕ್ಕೆ ಹಸು, ಕರು, ಎತ್ತು, ಎಮ್ಮೆ ಕೋಣಗಳನ್ನು ಸಾಗಿಸುವಾಗಲೂ ಸಾಗಣೆಯ ಪರವಾನಗಿ ಹೊಂದಿರಬೇಕಾದುದು ಕಡ್ಡಾಯವಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *