ಮೂರೇ ದಿನದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಗ್ರಹವಾದ ಹಣ ಎಷ್ಟು ಗೊತ್ತಾ..?
ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಶದ ಮೂಲೆ-ಮೂಲೆಯಲ್ಲಿ ಭರ್ಜರಿ ದೇಣಿಗೆ ಸಂಗ್ರಹ ಆಗ್ತಿದೆ. ಮೂರೇ ದಿನದಲ್ಲಿ 100 ಕೋಟಿ ಸಂಗ್ರಹ ಆಗಿದೆ. 400 ಕೋಟಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣ ಆಗಲಿದ್ದರೆ, ಮಂದಿರ ಸಂಕೀರ್ಣಕ್ಕೆ 1100 ಕೋಟಿ ಖರ್ಚು ಮಾಡಲಾಗ್ತಿದೆ.
ಜನವರಿ 14ರಿಂದ ಜನವರಿ 27ರವರೆಗೆ ದೇಶದ ವಿವಿಧ ರಾಜ್ಯಗಳಲ್ಲಿ ದೇಣಿಗೆ ಸಂಗ್ರಹ ಮಾಡಲಾಗ್ತಿದೆ. ಈಗಾಗಲೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ 5 ಲಕ್ಷ ರೂ, ಪೇಜಾವರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದನಾಥಸ್ವಾಮೀಜಿ, ಧರ್ಮಸ್ಥಳ ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಶೃಂಗೇರಿ ಸ್ವಾಮೀಜಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ರಾಮಮಂದಿರಕ್ಕೆ ದೇಣಿಗೆ ಸಮರ್ಪಣೆ ಮಾಡಿದ್ದಾರೆ. ಇದಲ್ಲದೇ ಬಿಜೆಪಿ, ಹಿಂದೂ ಸಂಘಟನೆಗಳು ಕೂಡಾ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ರಾಮಮಂದಿರ ನಿರ್ಮಾಣ ಟ್ರಸ್ಟ್ಗೆ ಸಲ್ಲಿಕೆ ಮಾಡುತ್ತಿವೆ.