ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು: ಕರ್ನಾಟಕ ಆಕ್ರಮಿತ ಪ್ರದೇಶ ಎನ್ನುವ ಮೂಲಕ ಠಾಕ್ರೆ ಮತ್ತೆ ವಿವಾದ

ಮುಂಬಯಿ: ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಘೋಷಿಸಿದ್ದಾರೆ. ‘ಮರಾಠಾ ಹುತಾತ್ಮರ ದಿನ’ವಾದ ಭಾನುವಾರ (ಜ.17) ಈ ಸಂಬಂಧ ಟ್ವೀಟ್‌ ಮಾಡಿದ್ದು, ”ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ನಿಜವಾದ ಗೌರವ,” ಎಂದು ಹೇಳಿದ್ದಾರೆ.

”ಮರಾಠಾ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಹಾಗೂ ಇತರ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು. ಈ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಈ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸುತ್ತೇವೆ” ಎಂದೂ ಠಾಕ್ರೆ ತಿಳಿಸಿದ್ದಾರೆ.

 

ಸಿಎಂ ಉದ್ಧವ್‌ ಠಾಕ್ರೆ ಟ್ವೀಟ್‌ನಿಂದ ಗಡಿ ವಿವಾದ ಮತ್ತೆ ಚರ್ಚೆಗೆ ಬಂದಿದೆ. ಎಂಇಎಸ್‌ ಮತ್ತಿತರ ಸಂಘಟನೆಗಳು ಪ್ರತಿವರ್ಷ ಜ.17 ಅನ್ನು ‘ಮರಾಠಾ ಹುತಾತ್ಮರ ದಿನವಾಗಿ ಆಚರಿಸುತ್ತವೆ. ಬೆಳಗಾವಿ, ಕಾರವಾರ ಮತ್ತು ನಿಪ್ಪಾಣಿ ತಮಗೆ ಸೇರಬೇಕು ಎಂದು ಮಹಾರಾಷ್ಟ್ರ ಸರಕಾರ ಹಲವು ವರ್ಷಗಳಿಂದ ಹೇಳುತ್ತ ಬಂದಿದೆ. ಎರಡೂ ರಾಜ್ಯಗಳ ನಡುವಿನ ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *