ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂಬವನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ
ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಜನವರಿ 26 ರಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ಪ್ರಾಣ ಕಳೆದುಕೊಂಡ ರೈತನ ಕುಟುಂಬ ಸದಸ್ಯರನ್ನು ಭೇಟಿಯಾಗಿದ್ದಾರೆ.
ಕೃಷಿಕರಾಗಿದ್ದ ನವನೀತ್ ಸಿಂಗ್ ಅವರ ಕುಟುಂಬ ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ವಾಸಿಸುತ್ತಿದೆ.
“ಟ್ರಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ಕೆನಡಾದಿಂದ ಬಂದು ಶಾಂತಿಯುತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ರೈತ ನವನೀತ್ ನನ್ನು ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ನಾವು ಅರಿತಿದ್ದೇವೆ. ಪ್ರಿಯಾಂಕಾ ಗಾಂಧಿ ನವನೀತ್ ಕುಟುಂಬವನ್ನು ಭೇಟಿಯಾಗಲಿದ್ದಾರೆ.” ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ನಿನ್ನೆ ಹೇಳಿಕೆಯಲ್ಲಿ ತಿಳಿಸಿದ್ದರು.
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಿಂದಾಗಿ ರಾಹುಲ್ ಗಾಂಧಿ ಪ್ರಿಯಾಂಕಾ ಅವರೊಡನೆ ರೈತ ಕುಟುಂಬದ ಭೇಟಿಗೆ ಹೋಗಿರಲಿಲ್ಲ
ಸರ್ಕಾರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಹೋರಾಟವನ್ನು ಕಾಂಗ್ರೆಸ್ ಪಕ್ಷ ನಿರಂತರವಾಗಿ ಬೆಂಬಲಿಸುತ್ತಿದೆ ಮತ್ತು ನೂತನ ಕೃಷಿ ಕಾಯ್ದೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ.