ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ..! ಮಂಗಳವಾರ ಸಭಾಪತಿ ಸ್ಥಾನಕ್ಕೆ ಎಲೆಕ್ಷನ್…!
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ತಮ್ಮ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿರುವ ಹಿನ್ನೆಲೆಯಲ್ಲಿ ರಿಸೈನ್ ಮಾಡಿದ್ರು. ಬಳಿಕ ಮಾತ್ನಾಡಿದ ಪ್ರತಾಪ್ ಚಂದ್ರ ಶೆಟ್ಟಿ, ರಾಜೀನಾಮೆಯಿಂದ ಯಾವುದೇ ಬೇಸರ ಇಲ್ಲ. ಇದೆಲ್ಲ ನಂಬರ್ ಗೇಮ್, ಇದರಲ್ಲಿ ವಿಶೇಷ ಏನಿಲ್ಲ ಅಂದ್ರು. ಇನ್ನು ಹೊಸ ಸಭಾಪತಿ ಆಯ್ಕೆಗೆ ಇಂದಿನಿಂದ ಪ್ರಕ್ರಿಯೆ ಆರಂಭವಾಗೋ ಸಾಧ್ಯತೆ ಇದೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಉಪಸಭಾಪತಿಯನ್ನು ಆಯ್ಕೆ ಮಾಡಿಕೊಂಡಿವೆ. ಸಭಾಪತಿ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡಲು ಬಿಜೆಪಿ ಒಪ್ಪಿದೆ.