ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ
ಶನಿವಾರ ಕಲಬುರಗಿ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾದ ಸಂತಕವಿ ಸರ್ವಜ್ಞ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಸಮಾಜದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಕುಂಬಾರ ಹಾಗೂ ಗೌರವಾಧ್ಯಕ್ಷ ವಿಠ್ಠಲ ಕುಂಬಾರ, ಸಮಾಜದ ಮುಖಂಡರುಗಳಾದ, ಹರೀಶ ಕುಂಬಾರ, ಆನಂದ ಕುಂಬಾರ, ಪಂಡರಿನಾಥ ಕುಂಬಾರ, ಭೀಮರಾಯ ಕುಂಬಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.