ಎಫ್.ಡಿ.ಎ. ಪರೀಕ್ಷಾ ಕೇಂದ್ರಕ್ಕೆ ಡಿ.ಸಿ. ಭೇಟಿ
ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ರವಿವಾರ ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮ ದರ್ಜೆ ಸಹಾಯಕ ಹುದ್ದೆಯ ನೇಮಕಾತಿಗೆ ನಡೆಸುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದರು.
ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯ ಪರೀಕ್ಷಾ ಕೇಂದ್ರಕ್ಕೆ ಪ್ರೋಬೇಷನರ್ ಐ.ಎ.ಎಸ್. ಅಧಿಕಾರಿ ಡಾ.ಆಕಾಶ್ ಶಂಕರ್ ಅವರೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಸ್ಟ್ರಾಂಗ್ ರೂಂಗೂ ಭೇಟಿ: ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಇರಿಸಲಾದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿನ ಸ್ಟ್ರಾಂಗ್ ರೂಂಗೂ ಭೇಟಿ ನೀಡಿದ ಡಿ.ಸಿ. ಅಲ್ಲಿನ ಭದ್ರತೆಯನ್ನು ಪರಿಶೀಲಿಸಿದರು. ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಪ್ರಭಾರಿ ಡಿ.ಡಿ.ಪಿ.ಐ ಉಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.