ಕಲಬುರಗಿ : ಜಿ. ಪಂ. ಅಧ್ಯಕ್ಷರಿಂದ ಉದ್ಯಮಶೀಲತಾ ಜಾಗೃತಿ ಕಾರ್ಯಾಗಾರ ಉದ್ಘಾಟನೆ
ಕಲಬುರಗಿ ಜಿಲ್ಲಾ ಪಂಚಾಯತ್ ಮತ್ತು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಶನಿವಾರ ಆಳಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಉದ್ಯಮಶೀಲತಾ ಜಾಗೃತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಗುರುಶಾಂತ ಪಾಟೀಲ, ಪ್ರಾಚಾರ್ಯ ನಿಂಗಪ್ಪ ಪೂಜಾರಿ, ಕೈಗಾರಿಕಾ ವಿಸ್ತರಣಾಧಿಕಾರಿ ಜಾಫರ ಅನ್ಸಾರಿ ಸೇರಿದಂತೆ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.