ತಮ್ಮ ವಿರುದ್ದ ಮಾನ ಹಾನಿಕರ ಸುದ್ದಿ ಪ್ರಸಾರ ಮಾಡದಂತೆ 6 ಸಚಿವರು ಕೋರ್ಟ್ ಮೊರೆ..?
ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ ಹೊರ ಬರುತ್ತಿದ್ದಂತೆ ಹಲವು ನಾಯಕರಿಗೆ ಭೀತಿ ಶುರುವಾಗಿದೆ.ಕೆಲವು ನಾಯಕರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಗಳನ್ನ ಪ್ರಸಾರ ಮಾಡದಂತೆ ಕೆಲವು ನಾಯಕರು ಕೋರ್ಟ್ ಮೊರೆ ಹೋಗಿದ್ದಾರೆ.
ತಮ್ಮ ವಿರುದ್ಧ ಮಾಧ್ಯಮಗಳು ಮಾನಹಾನಿಕರ ವರದಿ ಪ್ರಸಾರ ಮಾಡಬಾರದು ಎಂದು 6 ಸಚಿವರು ಕೋರ್ಟ್ ಮೆಟ್ಟಿಲೇರಿದ್ದಾರೆ.ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್ , ಎಸ್.ಟಿ. ಸೋಮಶೇಕರ್, ಕೆ.ಸುಧಾಕರ್, ನಾರಯಣ ಗೌಡ , ಭೈರತಿ ಬಸವರಾಜ್ ಎಂದು ತಿಳಿದುಬಂದಿದೆ. ಬೆಂಗಳೂರಿನ ಸಿಟ್ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಿರುದ್ಧ ಸುದ್ಧಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಬೇಕು ಅಂತ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದು, ಮಾನಹಾನಿಕರ ಸುದ್ದಿ ಪ್ರಸಾರದ ಭೀತಿಯಿಂದ ಮತ್ತು ಅಂಥ ಸುದ್ದಿ ಪ್ರಸಾರವಾಗುವ ಮೊದಲೇ ನ್ಯಾಯಾಲಯದ ಮೂಲಕ ನಿರ್ಬಂಧ ವಿಧಿಸಲು ಸಚಿವರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ .ನೌಕರಿ ಆಮಿಷ ಒಡ್ಡಿ ಯುವತಿಯನ್ನ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡ ಆರೋಪಕ್ಕೆ ಸಿಲುಕಿರುವ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲೇ ಈ ಬೆಳವಣಿಗೆ ನಡೆದಿದೆ.