Farmers: ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಅನ್ನದಾತನಿಗೆ ಖಾತೆಗೆ ₹ 4 ಸಾವಿರ ಜಮಾ!
ನವದೆಹಲಿ: ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಹೊಸದಾಗಿ ನೋಂದಾಯಿಸಿಕೊಂಡವರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೀಡಲಾಗುತ್ತದೆ.
ಕೇಂದ್ರ ಸರ್ಕಾರದ ಶೇಕಡ 100 ರಷ್ಟು ಧನ ಸಹಾಯ ಹೊಂದಿರುವ ಈ ಯೋಜನೆಯಡಿಯಲ್ಲಿ ರೈತರಿಗೆ(Farmers) 6 ಸಾವಿರ ರೂ. ನೆರವು ನೀಡಲಾಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವಾರ್ಷಿಕ 6 ಸಾವಿರ ರೂಪಾಯಿಗಳನ್ನು ಮೂರು ಕಂತುಗಳಲ್ಲಿ ವರ್ಗಾವಣೆ ಮಾಡಲಾಗುತ್ತದೆ.
ಇನ್ನು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ(Kisan samman nidhi yojana)ಗೆ ನೋಂದಾಯಿಸಿಕೊಳ್ಳಲು ಮಾಹಿತಿ ಇಲ್ಲಿದೆ. ಈ ತಿಂಗಳ ಅಂತ್ಯದೊಳಗೆ ನೋಂದಾಯಿಸಿಕೊಂಡರೆ 4000 ರೂಪಾಯಿಯನ್ನು ರೈತರ ಖಾತೆಗೆ ಜಮಾ ಮಾಡಲಾಗುವುದು ಎಂದು ಹೇಳಲಾಗಿದೆ.
ಮಾರ್ಚ್ 31 ರೊಳಗೆ ಹೊಸದಾಗಿ ನೋಂದಾಯಿಸಿಕೊಂಡ ರೈತರ ಖಾತೆ(Account)ಗೆ ಈ ತಿಂಗಳು 2000 ರೂ., ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಎರಡನೇ ಕಂತಿನ 2000 ರೂಪಾಯಿ ಜಮಾ ಮಾಡಲಾಗುವುದು.