ಅನುಗ್ರಹ ಯೋಜನೆ ಮುಂದುವರಿಕೆ: ಸಿದ್ದರಾಮಯ್ಯ ಬೇಡಿಕೆಗೆ ಮಣಿದ ರಾಜ್ಯ ಸರ್ಕಾರ!

ಹೈಲೈಟ್ಸ್‌:

  • ವಿಧಾನಸಭೆಯಲ್ಲಿ ಕರ್ನಾಟಕ ಬಜೆಟ್ 2021ನ್ನು ಮಂಡಿಸುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.
  • ಅನುಗ್ರಹ ಯೋಜನೆ ಮುಂದಿವರಿಕೆಗೆ ಒಪ್ಪಿದ ಸಿಎಂ ಬಿಎಸ್‌ವೈ ನೇತೃತ್ವದ ರಾಜ್ಯ ಸರ್ಕಾರ.
  • ಕುರಿಗಳು ಸತ್ತರೆ ಐದು ಸಾವಿರ ರೂ. ಗಳ ಪರಿಹಾರ ನೀಡುವ ಅನುಗ್ರಹ ಯೋಜನೆ.
  • ಅನುಗ್ರಹ ಯೋಜನೆ ಹಿಂಪಡೆದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚಿರಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ.
  • ವಿಪಕ್ಷ ನಾಯಕ ಸಿದ್ದರಾಮಯ್ಯ ಬೇಡಿಕೆಗೆ ಮಣಿದ ಸಿಎಂ ಬಿಎಸ್‌ವೈ ನೇತೃತ್ವದ ರಾಜ್ಯ ಸರ್ಕಾರ.

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿಅನುಗ್ರಹ ಯೋಜನೆಯನ್ನು ಮುಂದುವರೆಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದೆ.

ಕುರಿಗಳು ಸತ್ತರೆ ಐದು ಸಾವಿರ ರೂ. ಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ರಾಜ್ಯ ಸರ್ಕಾರ ಈ ಹಿಂದೆ ಹಿಂಪಡೆದಿತ್ತು. ರಾಜ್ಯ ಸರ್ಕಾರದ ಈ ನಿರ್ಣಯ ವಿರೋಧಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದರು.

ಒಂದು ವೇಳೆ ಅನುಗ್ರಹ ಯೋಜನೆಯನ್ನು ಜಾರಿಗೊಳಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ಮಾಡುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು.

ಈ ಕುರಿತು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಸಿದ್ದರಾಮಯ್ಯ, ಮಳೆ, ಸಿಡಿಲು, ಪ್ರವಾಹ ಹಾಗೂ ಅಪಘಾತದಲ್ಲಿ ಕುರಿಗಳು ಸಾವಿಗೀಡಾದರೆ ಐದು ಸಾವಿರ ರೂ.ಗಳ ಪರಿಹಾರ ನೀಡುವ ಅನುಗ್ರಹ ಯೋಜನೆಯನ್ನು ತಾವು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಈ ಯೋಜನೆಗೆ ತಡೆ ನೀಡಿ ರಾಜ್ಯ ಸರ್ಕಾರ ಅನ್ಯಾಯವೆಸಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಅದರಂತೆ ಸಿದ್ದರಾಮಯ್ಯ ಒತ್ತಾಯಕ್ಕೆ ಮಣಿದಿರುವ ಸಿಎಂ ಬಿಎಸ್‌ವೈ ನೇತೃತ್ವದ ರಾಜ್ಯ ಸರ್ಕಾರ, ಅನುಗ್ರಹ ಯೋಜನೆಗೆ ಅನುದಾನ ಮೀಸಲಿಡುವುದಾಗಿ ಘೋಷಿಸಿದೆ.

ವಿಧಾನಸಭೆಯಲ್ಲಿ ಕರ್ನಾಟಕ ಬಜೆಟ್ 2021ನ್ನು ಮಂಡಿಸುತ್ತಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಅನುಗ್ರಹ ಯೋಜನೆಗೆ ಅನುದಾನ ಘೋಷಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *