ಬಿಎಸ್‌ವೈ ಬಜೆಟ್: ಯಾವ ಜಾತಿಗೆ ಎಷ್ಟು ಅನುದಾನ..? ಯಾವ ಧರ್ಮಕ್ಕೆ ಸಿಕ್ಕಿದ್ದು ಏನು..?

ಹೈಲೈಟ್ಸ್‌:

  • ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಸಮುದಾಯಗಳಿಗೆ ಅನುದಾನ
  • ಕ್ರೈಸ್ತ ಸಮುದಾಯದ ಹಾಸ್ಟೆಲ್, ವೃದ್ಧಾಶ್ರಮಗಳಿಗೆ ಅನುದಾನ
  • ಹಿಂದುಳಿದ ವರ್ಗಗಳ ಅಭಿವೃದ್ಧಿಗೂ ಸರ್ಕಾರದಿಂದ ಹಣ

ಬೆಂಗಳೂರು: ಬಜೆಟ್‌ನಲ್ಲಿ ಮಠ-ಮಾನ್ಯಗಳಿಗೆ ಭಾರೀ ಪ್ರಮಾಣದಲ್ಲಿ ಅನುದಾನ ನೀಡುವ ಮೂಲಕ ಈ ಹಿಂದೆ ಸುದ್ದಿಯಲ್ಲಿದ್ದ ಸಿಎಂ

ಯಡಿಯೂರಪ್ಪ, ತಮ್ಮ ಈ ಬಾರಿಯ ಬಜೆಟ್‌ನಲ್ಲಿ ಸರ್ವ ಧರ್ಮಗಳಿಗೂ ಸಾಕಷ್ಟು ಅನುದಾನಗಳ ಮಹಾಪೂರವನ್ನೇ ಹರಿಸಿದ್ದಾರೆ.

ಒಕ್ಕಲಿಗ ಸಮುದಾಯ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ಮೀಸಲಿಡಲು ನಿರ್ಧರಿಸಿದೆ.

ಇದೇ ವೇಳೆ, ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ 500 ಕೋಟಿ ಅನುದಾನ ಮೀಡಲಿಡಲಾಗಿದೆ. ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ 50 ಕೋಟಿ ರೂ ಗಳಲ್ಲಿ ಕಾರ್ಯಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ತುಮಕೂರಿನಲ್ಲಿ ಶ್ರೀ ಶಿವಕುಮಾರ ಸ್ವಾಮಿಗಳ ಮತ್ತು ಉಡುಪಿಯಲ್ಲಿ ಪೇಜಾವರ ವಿಶ್ವೇಶ ತೀರ್ಥ ಶ್ರೀಪಾದರ ಗೌರವಾರ್ಥ ಸ್ಮೃತಿ ವನವನ್ನು ತಲಾ ಎರಡು ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಯಡಿಯೂರಪ್ಪ ವಿವರಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳ ಸಮಗ್ರ ಏಳಿಗೆಗಳಾಗಿ ಒಟ್ಟು 1,500 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಪ್ರಕಟಿಸಿರುವ ಸಿಎಂ ಯಡಿಯೂರಪ್ಪ, ಈ ಪೈಕಿ ಕ್ರೈಸ್ತ ಸಮುದಾಯಕ್ಕೆ 200 ಕೋಟಿ ರೂ. ನೀಡಿದ್ದಾರೆ.

ರಾಜ್ಯದ ಕ್ರಿಶ್ಚಿಯನ್ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ, ಚರ್ಚ್‌ ನವೀಕರಣ/ ದುರಸ್ತಿ, ಸಮುದಾಯ ಭವನ ಕಟ್ಟಡ ನಿರ್ಮಾಣ , ಅನಾಥಾಶ್ರಮ ಮತ್ತು ವೃದ್ಧಾಶ್ರಮ ಸೇರಿದಂತೆ ಮುಂತಾದ ಕಾರ್ಯಕ್ರಮಗಳಿಗೆ 200 ಕೋಟಿ ವೆಚ್ಚದ ಕಾಮಗಾರಿಗಳಿಗೆ ಸರ್ಕಾರ ನೆರವು ನೀಡಲು ನಿರ್ಧರಿಸಿದೆ.

ಜೈನ ಕಾಶಿ ಹಾಸನದ ಶ್ರವಣಬೆಳಗೊಳ ಮತ್ತಿತರ ಜೈನ ಪುಣ್ಯ ಕ್ಷೇತ್ರಗಳಲ್ಲಿ ವಸತಿ ಗೃಹ, ಪಾದಚಾರಿ ರಸ್ತೆ ಹಾಗೂ ಇತರ ಮೂಲ ಸೌಕರ್ಯಕ್ಕೆ 50 ಕೋಟಿ ರೂ. ಮೀಸಲಿಡಲಾಗಿದೆ.

ಇನ್ನು ಶೋಷಿತ ಸಮುದಾಯಗಳ ಅಭಿವೃದ್ಧಿಗೆ 500 ಕೋಟಿ ರೂ. ಮೀಸಲಿಡಲಾಗಿದ್ದು, ಈ ವರ್ಗದಲ್ಲಿ ಬರುವ ಜಾತಿಗಳಿಗೆ ಯೋಜನೆಯ ಲಾಭ ಸಿಗಲಿದೆ. ರಾಜ್ಯದ ಪರಿಶಿಷ್ಟ

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *