ಬೆಲೆ ಏರಿ ಬಗ್ಗೆ ಚರ್ಚಿಸುವ ಅಗತ್ಯವಿದೆ : ಮಲ್ಲಿಕಾರ್ಜುನ ಖರ್ಗೆ
ನವದೆಹಲಿ,ಮಾ.8-ದೇಶದ ಜನತೆ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಇಂತಹ ಗಂಭೀರ ವಿಚಾರದ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯಲ್ಲಿಂದು ಒತ್ತಾಯಿಸಿದರು. ಸಭೆಯಲ್ಲಿ ಯಾವುದೇ ವಿಚಾರಗಳನ್ನು ಚರ್ಚಿಸದೆ, ಹೆಚ್ಚುತ್ತಿರುವ ತೈಲ ಬೆಲೆ ಏರಿಕೆ ಹಾಗು ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳದ ಬಗ್ಗೆ ಗಂಭೀರ ಚರ್ಚೆ ನಡೆಸಬೇಕಿದೆ ಎಂದು ಸೆಕ್ಷನ್ 267 ಅಡಿಯಲ್ಲಿ ನೋಟೀಸ್ ನೀಡಿದರು.