ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ: ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾ.17 ರಂದು ಪ್ರಧಾನಿ ಮೋದಿ ಸಭೆ
ನವದೆಹಲಿ: ಭಾರತದಲ್ಲಿ ದಿನ ಕಳೆದಂತೆ ಕೊರೋನಾ ವೈರಸ್ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾರ್ಚ್ 17ಕ್ಕೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ.
ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿಯವರು ಮಾರ್ಚ್ 17ರ ಮಧ್ಯಾಹ್ನ 12.30ಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮೋದಿಯವರು ಸಭೆ ಕರೆದ ಬೆನ್ನಲ್ಲೇ, ಲಾಕ್ಡೌನ್ ಆತಂಕ ಶುರುವಾಗಿದೆ.
ಮೋದಿ ಜನವರಿ ತಿಂಗಳಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದರು. ಕೊರೋನಾ ಲಸಿಕೆ ಕುರಿತು ಈ ಸಭೆ ನಡೆಸಲಾಗಿತ್ತು. ಇದೀಗ ಮೋದಿ, ಎಲ್ಲಾ ಮುಖ್ಯಮಂತ್ರಿಗಳಿಂದ ಕೊರೋನಾ ನಿಯಂತ್ರಿಸಲು ಕ್ರಮಗಳ ಕುರಿತು ಮಾಹಿತಿ ಪಡೆಯಲಿದ್ದಾರೆ.
ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಳಿಗೆ ಮಹತ್ವದ ಸಲಹೆ ನೀಡುವ ಸಾಧ್ಯತೆ ಇದೆ. ಮೋದಿ ಸಭೆ ಇದೀಗ ಕುತೂಹಲಕ್ಕೂ ಕಾರಣವಾಗಿದೆ.