ಬಿಜೆಪಿ ಸರ್ಕಾರ ಬಂದ್ಮೇಲೆ ಕಲ್ಯಾಣ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ.. ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಈಗಾಗಲೇ ಕೊರೊನಾ ನೆಪವೊಡ್ಡಿ 371(ಜೆ) ಅಡಿಯಲ್ಲಿ ನೇರ ನೇಮಕಾತಿಗಳಿಗೂ ತಡೆಯೊಡ್ಡಿರುವ ರಾಜ್ಯ ಸರ್ಕಾರ, ಈಗ ಜವಳಿ ಪಾರ್ಕ್ ಯೋಜನೆಯನ್ನೂ ಕಿತ್ತುಕೊಂಡು. ಇಲ್ಲಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಮೋಸ ಮಾಡಿದ್ದಾರೆ..

 

ಕಲಬುರಗಿ : ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡದೆ ಇರುವುದು ತೀವ್ರ ಬೇಸರ ತರಿಸಿದೆ ಎಂದು ಮಾಜಿ‌ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈ ಹಿಂದೆ ಪ್ರಸ್ತಾಪಿಸಲಾದಂತೆ ಕಲಬುರಗಿಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ಅಡಿಗಲ್ಲು‌ ನೆರವೇರಿಸಲಾಗಿತ್ತು. ಇಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ವಿಚಾರ ಪ್ರಸ್ತಾಪಿಸಿ ಸರ್ಕಾರದಿಂದ ಉತ್ತರ ಬಯಸಿ ಜವಳಿ ಪಾರ್ಕ್ ಸ್ಥಾಪನೆಗೆ ಅನುದಾನ ಕೂಡ ಬಿಡುಗಡೆಯಾಗಿತ್ತು.

ಜವಳಿ ಪಾರ್ಕ್​ನನ್ನು ಕೇಂದ್ರ ಸರ್ಕಾರ ವಾಪಸ್ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದಿಯೇ? ಹಾಗಿದ್ದರೆ, ಜವಳಿ ಪಾರ್ಕ್ ಉಳಿಸಿಕೊಳ್ಳಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದ್ದಾರೆ.

ಜವಳಿ ಸಚಿವರ ಪ್ರತಿಕ್ರಿಯೆ ಏನು? : ಜವಳಿ ಪಾರ್ಕ್ ಕುರಿತು ಸದನದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಉತ್ತರಿಸಿದ ಕೈಮಗ್ಗ ಹಾಗೂ ಜವಳಿ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ್ ಅವರು, ಜವಳಿ ಪಾರ್ಕ್ ಉಳಿಸಿಕೊಳ್ಳಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯವರು ಕೇಂದ್ರ ಸರ್ಕಾರದ ಜವಳಿ ಮಂತ್ರಾಲಯಕ್ಕೆ ಈ‌ ಯೋಜನೆಯನ್ನು ಮುಂದುವರೆಸುವಂತೆ ಕೋರಿ ದಿನಾಂಕ 10.02.2020 ರಂದು ಪತ್ರ ಬರೆದಿದ್ದಾರೆ.

ಆದರೆ, ಕೇಂದ್ರ ಈ ಯೋಜನೆಗೆ ಒಪ್ಪಿಗೆ ನೀಡಿರುವುದಿಲ್ಲ ಹಾಗೂ ಜವಳಿ ಪಾರ್ಕ್‌ನ ಮೂಲ ಸೌಲಭ್ಯ ಅಭಿವೃದ್ಧಿಗಾಗಿ ಈಗಾಗಲೇ ಕೇಂದ್ರದಿಂದ ಬಿಡುಗಡೆ ಮಾಡಿರುವ 1.85 ಕೋಟಿ ರೂ. ಹಿಂದಿರುಗಿಸಲು ಕೋರಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದಾಗಿನಿಂದ ಕಲ್ಯಾಣ ಕರ್ನಾಟಕಕ್ಕೆ ಗ್ರಹಣ : ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ.

ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲಬುರಗಿ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಮಂಜೂರಾಗಿದ್ದ ಎಲ್ಲಾ ಯೋಜನೆಗಳನ್ನು ಒಂದೊಂದಾಗಿ ಕೈಬಿಡಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *